ಬೆಳಗಾವಿ : ಕಳೆದ 35 ದಿನಗಳಿಂದ ಬೆಳಗಾವಿಯಲ್ಲಿ ಸಿಲುಕಿದ್ದ ರಾಜಸ್ಥಾನ ಮೂಲದ ಕಾರ್ಮಿಕರನ್ನು ಇಂದು ಅವರ ತವರು ರಾಜ್ಯಕ್ಕೆ ಕಳುಹಿಸಲಾಯಿತು.
ರಾಜಸ್ಥಾನದಿಂದ ಬಂದಿದ್ದ 6 ಖಾಸಗಿ ಬಸ್ಗಳ ಮೂಲಕ 169 ವಲಸೆ ಕಾರ್ಮಿಕರನ್ನು ಕಳುಹಿಸಿಕೊಡಲಾಯಿತು. ರಾಜಸ್ಥಾನ ಮೂಲದ ಕಾರ್ಮಿಕರು ಬೆಂಗಳೂರಿನಲ್ಲಿ ಕೂಲಿ ಮಾಡುತ್ತಿದ್ದರು. ಲಾಕ್ಡೌನ್ ಇದ್ದರೂ ಕಂಟೈನರ್ ಮೂಲಕ ಬೆಳಗಾವಿ ಮಾರ್ಗವಾಗಿ ರಾಜಸ್ಥಾನಕ್ಕೆ ತೆರಳಲು ಪ್ರಯತ್ನಿಸುತ್ತಿದ್ದ ಕಾರ್ಮಿಕರನ್ನು ಮಾರ್ಚ್ 28ರಂದು ಪೊಲೀಸರು ತಡೆದು ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಿದ್ದರು.
ಕಾರ್ಮಿಕರನ್ನು ಸ್ವಂತ ರಾಜ್ಯಕ್ಕೆ ಕಳುಹಿಸಲು ಕೇಂದ್ರ ಸರ್ಕಾರ ಆದೇಶ ನೀಡಿದ ಹಿನ್ನೆಲೆಯಲ್ಲಿ, ಪ್ರತಿ ಬಸ್ನಲ್ಲಿ 28 ಕಾರ್ಮಿಕರಿಗೆ ಪ್ರಯಾಣಿಸಲು ಅವಕಾಶ ಒದಗಿಸಲಾಗಿದೆ. ಮಾಸ್ಕ್, ಸ್ಯಾನಿಟೈಜರ್ ಹಾಗೂ ಊಟದ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದು ನೋಡಲ್ ಅಧಿಕಾರಿ ಎಸ್ ವಿ ದೊಡ್ಡಗೌಡರ ತಿಳಿಸಿದ್ದಾರೆ.