ETV Bharat / state

ರಾಣಿ ಚನ್ನಮ್ಮಾಜಿ ಮಹಿಳಾ ಕುಲಕ್ಕೆ ಸ್ಫೂರ್ತಿಯ ಸಂಕೇತ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ - ರಾಜ್ಯಮಟ್ಟದ ಮಹಿಳಾಗೋಷ್ಠಿ

ರಾಜ್ಯ ಮಟ್ಟದ ಚನ್ನಮ್ಮನ ಕಿತ್ತೂರು ಉತ್ಸವದ 3ನೇ ದಿನದಂದು ನಡೆದ ಮಹಿಳಾಗೋಷ್ಠಿಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಿದರು.

Minister Lakshmi Hebbalkar was felicitated in the women's conference programme.
ಮಹಿಳಾಗೋಷ್ಠಿ ಕಾಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸನ್ಮಾನಿಸಲಾಯಿತು.
author img

By ETV Bharat Karnataka Team

Published : Oct 25, 2023, 5:36 PM IST

ಬೆಳಗಾವಿ: ಮಹಿಳೆಗೆ ಯಾವುದೇ ಜವಾಬ್ದಾರಿ ನೀಡಿದರೂ ಆಕೆ ಅಚ್ಚುಕಟ್ಟಾಗಿ ನಿರ್ವಹಿಸುತ್ತಾಳೆ. ವಿಶ್ವಾಸದ್ರೋಹವನ್ನು ಸ್ತ್ರೀಕುಲ ಎಂದೂ ಮಾಡುವುದಿಲ್ಲ. ಆದರೆ ಒಬ್ಬ ಮಹಿಳೆ ಇನ್ನೊಬ್ಬ ಮಹಿಳೆಯನ್ನು ಸಹಿಸಿಕೊಳ್ಳುವುದಿಲ್ಲ ಎನ್ನುವ ಅಪವಾದವಿದೆ. ಇದನ್ನು ತೊಡೆದು ಹಾಕಲು ನಾವೆಲ್ಲ ಒಂದಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಕಿತ್ತೂರು ಉತ್ಸವದಲ್ಲಿ ಬುಧವಾರ ರಾಜ್ಯಮಟ್ಟದ ಮಹಿಳಾಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು. ಚಂದ್ರಯಾನ ಸೇರಿದಂತೆ ಪ್ರತಿಯೊಂದು ಸಾಧನೆಯಲ್ಲೂ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದು. ಈಗ ರಾಜಕೀಯದಲ್ಲಿಯೂ ಶೇ.33ರಷ್ಟು ಮೀಸಲಾತಿ ಘೋಷಣೆಯಾಗಿದೆ. ಕೊರೊನಾದಂತಹ ಸಂಕಷ್ಟದ ಸಂದರ್ಭದಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ದೇವರಂತೆ ಕಷ್ಟದಲ್ಲಿರುವವರ ಸಹಾಯಕ್ಕೆ ಬಂದಿದ್ದರು ಎಂದು ಸ್ಮರಿಸಿದರು.

ರಾಣಿ ಚನ್ನಮ್ಮ ಇಡೀ ಮಹಿಳಾ ಕುಲಕ್ಕೆ ಸ್ವಾಭಿಮಾನ, ಹೋರಾಟದ ಕಿಚ್ಚು ಹಾಗೂ ಜೀವನ ಸ್ಫೂರ್ತಿಯ ಸಂಕೇತ. ನಾನು ಮೊದಲಿನಿಂದಲೂ ಚನ್ನಮ್ಮನ ಆದರ್ಶವನ್ನು ಮೈಗೂಡಿಸಿಕೊಂಡು ನಡೆಯಲು ಪ್ರಯತ್ನಿಸುತ್ತಿದ್ದೇನೆ. ಗ್ರಾಮೀಣ ಭಾಗದ ಮಹಿಳೆಯರು ತಮ್ಮ ಕುಟುಂಬ, ಮಕ್ಕಳ ವಿದ್ಯಾಭ್ಯಾಸಗಳಿಗಾಗಿ ದಿನವಿಡೀ ಹೋರಾಡುವುದನ್ನು ಹತ್ತಿರದಿಂದ ಕಣ್ಣಾರೆ ಕಂಡಿದ್ದೇನೆ ಎಂದರು.

ಹಿರಿಯ ಪತ್ರಕರ್ತೆ, ರಾಜ್ಯ ಲೇಖಕಿಯರ ಸಂಘದ ಕಾರ್ಯದರ್ಶಿ ಭಾರತಿ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ.ಮಾಜಿ ಸದಸ್ಯೆ ರೋಹಿಣಿ ಪಾಟೀಲ ಆಶಯ ನುಡಿಗಳನ್ನಾಡಿದರು. ಬೈಲಹೊಂಗಲ ಎ.ಸಿ.ಪ್ರಭಾವತಿ ಫಕೀರಪುರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಚನ್ನಮ್ಮನ ಹಾಗೂ ಜೀವನ ಹೋರಾಟದ ರೂಪಕವಾಗಿ ಮಹಿಳಾ ವಿಷಯ ಕುರಿತು ಡಾ.ಮಾನಸಾ, ಕಿತ್ತೂರು ರಾಣಿ ಚನ್ನಮ್ಮ ಹಾಗೂ ಮಹಿಳಾ ಸಬಲೀಕರಣ ವಿಷಯದ ಕುರಿತಾಗಿ ಡಾ.ಸುಜಾತಾ ಕೊಂಬಳಿ, ಕಿತ್ತೂರು ಸಂಸ್ಥಾನ ಹಾಗೂ ರಾಣಿ ಚನ್ನಮ್ಮ ವಿಷಯವಾಗಿ ಡಾ.ಸಾವಿತ್ರಿ ಕಮಲಾಪುರ, ಸ್ವಾಭಿಮಾನದ ಹೆಗ್ಗುರುತಾಗಿ ರಾಣಿ ಚನ್ನಮ್ಮ ವಿಷಯದ ಕುರಿತಾಗಿ ಡಾ.ಸಂಗೀತಾ ಕುಸುಗಲ್, ಚನ್ನಮ್ಮ ಹಾಗೂ ಪ್ರಸ್ತುತ ವಿಷಯಕ್ಕೆ ಸಂಬಂಧಿಸಿದಂತೆ ಜಯಶ್ರೀ ಚುನಮರಿ, ಕಿತ್ತೂರು ಅಂದು- ಇಂದು ವಿಷಯವಾಗಿ ಭಾರತಿ ಮದಭಾವಿ, ರಾಣಿ ಚನ್ನಮ್ಮಳ ಆಡಳಿತ ಹಾಗೂ ಮಮತಾಮಯಿ ವಿಷಯವಾಗಿ ಸ್ವಾತಿ ರಾವ್, ರಾಣಿ ಚನ್ನಮ್ಮ ಹಾಗೂ ಬ್ರಿಟಿಷರು ವಿಷಯವಾಗಿ ಮೀನಾಕ್ಷಿ ದೀಪಕ್, ಕಿತ್ತೂರು ಚನ್ನಮನ ಆಡಳಿತದ ವೈಜ್ಞಾನಿಕ ದೃಷ್ಟಿಕೋನ ವಿಷಯವಾಗಿ ಭಾರತಿ ಮಠದ್ ಮಾತನಾಡಿದರು.

ಇದನ್ನೂ ಓದಿ: ಕಿತ್ತೂರು ಉತ್ಸವ: ಸಿರಿಧಾನ್ಯಗಳಲ್ಲಿ ಅರಳಿದ ಚನ್ನಮ್ಮನ ಮೂರ್ತಿ, ತರಕಾರಿಯಲ್ಲಿ ಆಕರ್ಷಣೀಯ ಕಲಾಕೃತಿಗಳು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.