ETV Bharat / state

ಸರ್ಕಾರಿ ಬಸ್​ಗಳ ಮೇಲೆ ಕಲ್ಲೆಸೆತ: ಇಬ್ಬರು ಕಿಡಿಗೇಡಿಗಳ ಬಂಧನ, ಪ್ರಯಾಣಿಕನಿಗೆ ಗಾಯ

author img

By ETV Bharat Karnataka Team

Published : Dec 22, 2023, 7:59 AM IST

Updated : Dec 22, 2023, 12:24 PM IST

Stone pelting on government buses: ಸರ್ಕಾರಿ ಬಸ್​ಗಳ ಮೇಲೆ ಕಲ್ಲು ಎಸೆದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಸ್​ನಲ್ಲಿದ್ದ ಪ್ರಯಾಣಿಕರೊಬ್ಬರು ಗಾಯಗೊಂಡಿದ್ದಾರೆ.

Stone pelting on government buses
ಸರ್ಕಾರಿ ಬಸ್​ಗಳ ಮೇಲೆ ಅಪರಿಚಿತ ವ್ಯಕ್ತಿಯಿಂದ ಕಲ್ಲೆಸೆತ, ಪ್ರಯಾಣಿಕನಿಗೆ ಗಾಯ

ಚಿಕ್ಕೋಡಿ: ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯ ಸರ್ಕಾರಿ ಬಸ್​ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಸ್ಪಿ ಭೀಮಾಶಂಕರ ಗುಳೇದ ಶುಕ್ರವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Stone pelting on government buse
ಸರ್ಕಾರಿ ಬಸ್​ಗಳ ಮೇಲೆ ಕಲ್ಲೆಸೆದಿದ್ದ ಇಬ್ಬರು ಕಿಡಿಗೇಡಿಗಳ ಬಂಧನ

ಬೆನಕನಹೊಳಿ ಗ್ರಾಮದ ಪರಶುರಾಮ ನಾಯಕ ಹಾಗೂ ಬಸವರಾಜ‌ ಸಿಂಧೆ ಬಂಧಿತ ಆರೋಪಿಗಳು. ಇಬ್ಬರು ಆರೋಪಿಗಳು ಕುಡಿದ ಮತ್ತಿನಲ್ಲಿ ದುಷ್ಕೃತ್ಯ ಎಸಗಿದ್ದಾರೆ. ಇಬ್ಬರು ಗೋವಾದಲ್ಲಿ ಗಾರೆ ಕೆಲಸ ಮಾಡುತ್ತಿದ್ದರು ಎಂದು ಎಸ್ಪಿ ತಿಳಿಸಿದ್ದಾರೆ.

ಘಟನೆಯಲ್ಲಿ ಓರ್ವ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ (ಹತ್ತರಕಿ NH4) ಬೆನಕನಹೊಳಿ ಗ್ರಾಮದ ಬಳಿ ಹುಕ್ಕೇರಿ - ಬೆಳಗಾವಿ ತಡೆರಹಿತ ಬಸ್ ಮೇಲೆ ದುಷ್ಕರ್ಮಿಯೊಬ್ಬ ಕಲ್ಲು ತೂರಾಟ ನಡೆಸಿದ್ದಾನೆ. ಪರಿಣಾಮ ಬಸ್​ನ ಎಡಭಾಗದ ಗ್ಲಾಸ್ ಒಡೆದು ಕಾಮತ್ಯಾಟ್ಟಿ ಗ್ರಾಮದ ಪ್ರಯಾಣಿಕ ರಮೇಶ್ ಚಿವಟೆಗೆ ಗಾಯಗೊಂಡಿದ್ದಾರೆ.

ಮತ್ತೊಂದೆಡೆ, ಮುಂಬೈಯಿಂದ ಹುಬ್ಬಳ್ಳಿ ಮಾರ್ಗವಾಗಿ ಸಂಚರಿಸುವ ಮಹಾರಾಷ್ಟ್ರ ಸಾರಿಗೆ ಬಸ್ ಮೇಲೂ ಕಲ್ಲು ತೂರಾಟ ನಡೆಸಲಾಗಿದೆ. ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ. ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ 112 ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ.

ಗಾಯಗೊಂಡ ರಮೇಶ್ ಚಿವಟೆಗೆ ಅವರಿಗೆ ಯಮಕರಮಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಯಮಕರಮಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೊತೆಗೆ ಘಟನಾ ಸ್ಥಳಕ್ಕೆ ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೇದ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಪ್ರಕರಣ, ಕೆಎಸ್‌ಆರ್‌ಟಿಸಿ ಬಸ್‌ಗೆ ಕಲ್ಲೆಸೆತ (ಚಿಕ್ಕೋಡಿ): ಮಹಾರಾಷ್ಟ್ರದ ಜತ್ತ ಪಟ್ಟಣದ ಸಮೀಪ ಕೆಲ ದುಷ್ಕರ್ಮಿಗಳು ಕೆಎಸ್​ಆರ್​ಟಿಸಿ ಬಸ್​ನ ಮೇಲೆ ಕಲ್ಲು ತೂರಿರುವ ಘಟನೆ ಜರುಗಿತ್ತು. ಈ ವೇಳೆ, ಕೆಲವು ಪ್ರಯಾಣಿಕರಿಗೆ ಗಾಯಗಳಾಗಿದ್ದವು. ವಿಜಯಪುರ ತಾಲೂಕಿನ ಇಂಡಿ ಘಟಕಕ್ಕೆ ಸೇರಿದ ಬಸ್​, ಜತ್ತ ಪಟ್ಟಣದಿಂದ ವಿಜಯಪುರಕ್ಕೆ ಹೋಗುತ್ತಿದ್ದ ಘಟನೆ ನಡೆದಿತ್ತು.

ದುಷ್ಕರ್ಮಿಗಳು, ಬಸ್​ ಅಡ್ಡಗಟ್ಟಿ ಕಲ್ಲು ತೂರಾಟ ನಡೆಸಿದ್ದರು. ಬಸ್​ನ ಹಿಂಭಾಗದ ಗಾಜು ಪುಡಿಯಾಗಿತ್ತು. ಗಾಜಿನ ಚೂರುಗಳು ಪ್ರಯಾಣಿಕರಿಗೆ ತಾಗಿದ್ದರಿಂದ ಗಾಯಗಳಾಗಿದ್ದವು. ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಇತ್ತೀಚೆಗೆ ಜತ್ತ ಪಟ್ಟಣ ಬಂದ್​ ಮಾಡಲಾಗಿತ್ತು. ಈ ಹಿಂದೆ, ಚಿಕ್ಕೋಡಿ ವಿಭಾಗದಿಂದ ಮಹಾರಾಷ್ಟ್ರದ ಕೊಲ್ಹಾಪುರ, ಮುಂಬೈ, ಸಾತಾರಾ, ವಿಶಾಲಗಡ್, ಮಿರಜ್, ಇಚಲಕರಂಜಿ ಸೇರಿದಂತೆ ಇತರ ಭಾಗಗಳಿಗೆ ತೆರಳುವ ಕೆಎಸ್ಆರ್​ಟಿಸಿ ಬಸ್​ಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಎನ್​ಡಬ್ಲ್ಯೂಕೆಎಸ್​ಆರ್​ಟಿಸಿ ವಿಭಾಗದಿಂದ ಮಹಾರಾಷ್ಟ್ರಕ್ಕೆ ಪ್ರತಿನಿತ್ಯ ಸಂಚರಿಸುತ್ತಿದ್ದ 215ಕ್ಕೂ ಹೆಚ್ಚು ಬಸ್‌ಗಳ ಸಂಚಾರ ಸ್ಥಗಿತ ಮಾಡಲಾಗಿತ್ತು. ಆ ಸಮಯದಲ್ಲಿ ಬೆಂಗಳೂರಿನಿಂದ ಸಂಚಾರ ಮಾಡುತ್ತಿದ್ದ ಶಿರಡಿ, ಮುಂಬೈ, ಪುಣೆ ಬಸ್​ಗಳನ್ನು ರದ್ದುಗೊಳಿಸಲಾಗಿತ್ತು ಎಂದು ಸಾರಿಗೆ ಸಂಸ್ಥೆ ತಿಳಿಸಿತ್ತು.

ಇದನ್ನೂ ಓದಿ: ಕೊಡಗು ಪೊಲೀಸ್​ ಇಲಾಖೆಯಲ್ಲಿ ಸಿಂಹದಂತೆ ಕಾರ್ಯನಿರ್ವಹಿಸುತ್ತಿದ್ದ ಲಿಯೋ ಶ್ವಾನ ಸಾವು

Last Updated : Dec 22, 2023, 12:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.