ETV Bharat / state

ಅಗತ್ಯ ವಸ್ತುಗಳ ಮಾರಾಟಕ್ಕೆ ಅನುಮತಿ ನೀಡಲು ಬೀದಿಬದಿ ತರಕಾರಿ ವ್ಯಾಪಾರಸ್ಥರ ಮನವಿ - ಅಥಣಿ

ಪಟ್ಟಣದಲ್ಲಿ ಜನಜಂಗುಳಿಯಿದ್ದ ಕಾರಣಕ್ಕೆ ಬೀದಿಬದಿ ತರಕಾರಿ ವ್ಯಾಪಾರಸ್ಥರನ್ನು ಶಂಕರನಗರಕ್ಕೆ ಸ್ಥಳಾಂತರ ಮಾಡಲಾಗಿತ್ತು. ಆದರೆ, ಅಲ್ಲೀಗ ಸರಿಯಾದ ವ್ಯಾಪಾರ ಆಗ್ತಿಲ್ಲ ಅಂತಾ ವ್ಯಾಪಾರಸ್ಥರು ತಮ್ಮ ನೋವು ತೋಡಿಕೊಂಡರು.

Street Vegetable traders
ಬೀದಿಬದಿ ತರಕಾರಿ ವ್ಯಾಪಾರಸ್ಥರಿಂದ ಮನವಿ
author img

By

Published : Jun 10, 2020, 3:01 PM IST

ಅಥಣಿ : ನಗರದಲ್ಲಿ ಲಾಕ್​ಡೌನ್ ಸಡಿಲಿಕೆ ಆದರೂ ಕೂಡ ತರಕಾರಿ ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಮಾರಾಟಕ್ಕೆ ಅನುಮತಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಮತ್ತು ಅನುಮತಿಗೆ ಆಗ್ರಹಿಸಿ ವ್ಯಾಪಾರಸ್ಥರು ವಿವಿಧ ಇಲಾಖೆಯ ಅಧಿಕಾರಿಗಳ ಸಹಕಾರ ಕೋರಿ ಮನವಿ ಸಲ್ಲಿಸಿದರು.

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಜನಜಂಗುಳಿಯಿದ್ದ ಕಾರಣಕ್ಕೆ ಬೀದಿಬದಿ ತರಕಾರಿ ವ್ಯಾಪಾರಸ್ಥರನ್ನು ಶಂಕರನಗರಕ್ಕೆ ಸ್ಥಳಾಂತರ ಮಾಡಲಾಗಿತ್ತು. ಕೇಂದ್ರ ಸರ್ಕಾರದಿಂದ ಲಾಕ್​​ಡೌನ್ ಸಡಿಲಿಕೆ ಮಾಡಲಾಗಿದೆ. ಇದರ ಪರಿಣಾಮವಾಗಿ ಮೊದಲಿನಂತೆ ನಮಗೆ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರಕ್ಕೆ ಅನುವು ಮಾಡಿಕೊಡಿ ಎಂದು ತಹಶೀಲ್ದಾರ್‌ ದುಂಡಪ್ಪ ಕೋಮಾರ ಅವರಿಗೆ ವ್ಯಾಪಾರಸ್ಥರು ಮನವಿ ಸಲ್ಲಿಸಿದರು.

ಇದೇ ವೇಳೆ ಮಾತನಾಡಿದ ವ್ಯಾಪಾರಸ್ಥರು, ನಾವು 70 ವರ್ಷದಿಂದ ಈ ಸ್ಥಳದಲ್ಲಿ ವ್ಯಾಪಾರ ಮಾಡುತ್ತಾ, ನಮ್ಮ ಜೀವನ ಸಾಗಿಸುತ್ತಿದ್ದೇವೆ. ಈಗ ಶಂಕರನಗರದಲ್ಲಿ ಜನರು ಬರುತ್ತಿಲ್ಲ. ನಮಗೆ ಇಲ್ಲೇ ವ್ಯಾಪಾರ ಮಾಡಲು ಅನುಮತಿ ನೀಡಿ ಎಂದು ತಾಲೂಕು ಆಡಳಿತಕ್ಕೆ ಮನವಿ ಮಾಡಿಕೊಂಡರು.

ಬೀದಿಬದಿ ವ್ಯಾಪಾರಕ್ಕೆ ಅನುಮತಿ ನೀಡಬೇಕೆಂದು ತರಕಾರಿ ವ್ಯಾಪಾರಸ್ಥರಿಂದ ಮನವಿ..

ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ದುಂಡಪ್ಪ ಕೋಮಾರ, ಕೊರೊನಾ ವೈರಸ್ ಮುಂಜಾಗ್ರತಾ ಕ್ರಮವಾಗಿ ಸರ್ಕಾರದ ನಿರ್ದೇಶನದಂತೆ ಮಾರುಕಟ್ಟೆ ಸ್ಥಳಾಂತರ ಮಾಡಲಾಗಿತ್ತು. ಸದ್ಯದ ಮಟ್ಟಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯವಹಾರ ನಡೆಸಬೇಕಾಗಿದೆ ಎಂದು ಮನವರಿಕೆ ಮಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.