ಬೆಳಗಾವಿ: ಕೊರೊನಾ ಹರಡದಂತೆ ತಡೆಗಟ್ಟಲು ಮಾಸ್ಕ್ ಕಡ್ಡಾಯ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಷೇಧ ಮಾಡಲಾಗಿದ್ದು ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲೆಯ ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಮಾಸ್ಕ್ ಧರಿಸದ, ಸಾರ್ವಜನಿಕ ಸ್ಥಳದಲ್ಲಿ ಉಗುಳಿದವರ ವಿರುದ್ಧ ಈಗಾಗಲೇ ಕೇಸ್ ದಾಖಲಿಸಲಾಗಿದ್ದು, ಜಿಲ್ಲೆಯಲ್ಲಿ ಮಾಸ್ಕ್ ಧರಿಸದ 420 ಜನರ ವಿರುದ್ಧ ಕೇಸ್ ದಾಖಲಿಸಿ ಅವರಿಂದ ಒಟ್ಟು 42,000 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಇದಲ್ಲದೇ ಸಾರ್ವಜನಿಕ ಸ್ಥಳದಲ್ಲಿ ಉಗುಳಿದ 133 ಜನರ ವಿರುದ್ಧ ಕೇಸ್ ದಾಖಲಿಸಿ ಅವರಿಂದ ಒಟ್ಟು 13,300 ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಈವರೆಗೂ 162 ಲಾಕ್‌ಡೌ್ನ್ ಉಲ್ಲಂಘನೆ ಆಗಿದ್ದು, ಒಟ್ಟು 280 ಜನರನ್ನು ಬಂಧಿಸಿ 1905 ವಾಹನಗಳ ಜಪ್ತಿ ಮಾಡಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.