ETV Bharat / state

ರಾಜ್ಯದ ಗಡಿಯಲ್ಲಿ ಪೊಲೀಸರ ಕಟ್ಟೆಚ್ಚರ: ಆರೋಗ್ಯ ಇಲಾಖೆಯಿಂದ ವಲಸಿಗರ ತಪಾಸಣೆ - Strict measurements taken in border districts

ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯದ ಗಡಿ ಭಾಗದಲ್ಲಿ ಪೊಲೀಸ್​ ಇಲಾಖೆ ಕಟ್ಟೆಚ್ಚರ ವಹಿಸಿದೆ. ರಾಜ್ಯಕ್ಕೆ ಪ್ರವೇಶಿಸುವವರ ತಪಾಸಣೆಯನ್ನು ಆರೋಗ್ಯ ಇಲಾಖೆ ಮಾಡುತ್ತಿದೆ.

Strict measurements taken in border districts
ಕರ್ನಾಟಕ ಗಡಿಯಲ್ಲಿ ಪೊಲೀಸರ ಕಟ್ಟೆಚ್ಚರ
author img

By

Published : May 7, 2020, 6:59 PM IST

ಚಿಕ್ಕೋಡಿ: ವಿವಿಧ ರಾಜ್ಯಗಳಿಂದ ಕನ್ನಡಿಗರು ಕರ್ನಾಟಕಕ್ಕೆ ಆಗಮಿಸುತ್ತಿರುವ ಹಿನ್ನೆಲೆ ರಾಜ್ಯದ ಗಡಿಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸುತ್ತಿದ್ದಾರೆ. ಕರ್ನಾಟಕ ಪ್ರವೇಶಿಸುವ ಪ್ರತಿಯೊಬ್ಬರ ಮಾಹಿತಿ ಕಲೆಹಾಕಲಾಗುತ್ತಿದೆ. ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.

ಗಡಿಯಲ್ಲಿ ಪೊಲೀಸರ ಕಟ್ಟೆಚ್ಚರ

ಬೆಳಗಾವಿ ಜಿಲ್ಲೆಯ ಗಡಿಯಲ್ಲಿರುವ ನಿಪ್ಪಾಣಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಇರುವ ಕೊಗನೊಳಿ ಟೋಲ್ ನಾಕಾ ಬಳಿ ಪ್ರತಿಯೊಬ್ಬರ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ರಾಜ್ಯ ಪ್ರವೇಶಕ್ಕಾಗಿ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲುತ್ತಿವೆ.

ಗಡಿವರೆಗೆ ಆಗಮಿಸಿ ಪ್ರವೇಶಕ್ಕೆ ಕಾಯುತ್ತಿರುವವರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಕರ್ನಾಟಕ ಪ್ರವೇಶಕ್ಕೆ ಸೇವಾ ಸಿಂಧು ಆ್ಯಪ್ ಮೂಲಕ ಹಾಗೂ ಸರ್ಕಾರದಿಂದ ಅನುಮತಿ ಪಡೆದವರಿಗೆ ಪ್ರವೇಶ ನೀಡಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.