ಚಿಕ್ಕೋಡಿ: ಹುಕ್ಕೇರಿ ತಾಲೂಕಿನ ಯಮಕನಮರಡಿ ಕೂಲಿ ಕಾರ್ಮಿಕರಿಗೆ ಅಂಬೇಡ್ಕರ್ ಜನ ಜಾಗೃತಿ ವೇದಿಕೆಯ ಸಂಘಟನೆ ವತಿಯಿಂದ ಕೂಲಿ ಕಾರ್ಮಿಕರಿಗೆ ಊಟ ಹಾಗೂ ದಿನನಿತ್ಯದ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು.
ಹುಕ್ಕೇರಿ ಹಾಗೂ ಯಮಕನಮರಡಿ ಗ್ರಾಮದ ಎಲ್ಲ ಬಡ ಕೂಲಿ ಕಾರ್ಮಿಕರಿಗೆ ಹಾಗೂ ದಿನನಿತ್ಯ ಕೂಲಿ ಕೆಲಸ ಮಾಡುವ ಜನರಿಗೆ ಲಾಕ್ಡೌನ್ನಿಂದ ತೊಂದರೆಯಾಗಿದೆ. ಕೂಲಿ ಕಾರ್ಮಿಕರಿಗೆ ಊಟದ ತೊಂದರೆ ಆಗದ ಹಾಗೆ, ದಿನಸಿ ಸಾಮಗ್ರಿಗಳ ಜೊತೆಗೆ ಅವಶ್ಯಕತೆ ಇರುವ ಎಲ್ಲ ಸಾಮಗ್ರಿಗಳನ್ನು ಅಂಬೇಡ್ಕರ್ ಜನ ಜಾಗೃತಿ ವೇದಿಕೆ ಮೂಲಕ ವಿತರಿಸಲಾಯಿತು.