ETV Bharat / state

ಪಂಚಮಸಾಲಿ 2ಎ ಮೀಸಲು ಅನುಷ್ಠಾನಕ್ಕೆ ಪಕ್ಷಾತೀತ ಬೆಂಬಲ: ರಮೇಶ ಜಾರಕಿಹೊಳಿ

ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಇದ್ದಾಗ ವಿನಯ ಕುಲಕರ್ಣಿ ಜತೆಗೆ ನನಗೂ‌ ಸಚಿವ ಸ್ಥಾನ ನೀಡುವಂತೆ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನನ್ನ ಪರವಾಗಿ ದಿಗ್ವಿಜಯ ಸಿಂಗ್ ಅವರಿಗೆ ಮನವಿ ಮಾಡಿಕೊಂಡಿದ್ದರು. ಹೀಗಾಗಿ ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಪಕ್ಷಾತೀತವಾಗಿ ಬೆಂಬಲ ನೀಡಲಾಗುವುದು ಎಂದರು.

Panchamasali 2A reservation
ಪಂಚಮಸಾಲಿ 2ಎ ಮೀಸಲಾತಿ
author img

By

Published : Oct 28, 2020, 3:29 PM IST

ಬೆಳಗಾವಿ: ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿ ನೀಡುವ ಕುರಿತಂತೆ ನಾಳೆ ಸಿಎಂ ಬಿಎಸ್​ವೈ ಅವರೊಂದಿಗೆ ಪಕ್ಷಾತೀತವಾಗಿ ಚರ್ಚಿಸಿ ಅನುಷ್ಠಾನಕ್ಕೆ ತರಲು ಶ್ರಮಿಸಲಾಗುವುದು ಎಂದು ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ‌ ಹೇಳಿದರು.

ತಾಲೂಕಿನ ಲಿಂಗಾಯತ ಪಂಚಮಸಾಲಿ ಸಮುದಾಯದ ಮೀಸಲಾತಿಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಸರ್ಕಾರದ ಪರವಾಗಿ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ, ಚುನಾವಣೆ ನೀತಿ ಸಂಹಿತೆ ಇರುವ ಕಾರಣ ಸರ್ಕಾರದ ಪರವಾಗಿ ಏನು ಘೋಷಣೆ ಮಾಡಲು ಸಾಧ್ಯವಿಲ್ಲ. ಆದರೆ, ಲಿಂಗಾಯತ ಪಂಚಮಸಾಲಿ ಹೋರಾಟದ ಪರವಾಗಿ ಸರ್ಕಾರವಿದೆ. ನಾನು ಕೂಡ ಈ ಭಾಗದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದ ಆಗುಹೋಗುಗಳ ಜೊತೆಗೆ ನಿಂತಿದ್ದೇನೆ. ಈಗಲೂ ಸಮಾಜದ ಬೆಂಬಲಕ್ಕೆ ಇದ್ದೇನೆ. ಇಂದು ಬೆಂಗಳೂರಿಗೆ ಹೋಗುತ್ತಿದ್ದೇನೆ. ಸಿಎಂ ಬಿಎಸ್​ವೈ ಅವರನ್ನು ಭೇಟಿಯಾಗಿ ಆದಷ್ಟು ಬೇಗ 2ಎ ಮೀಸಲಾತಿ ಅನುಷ್ಠಾನಕ್ಕೆ ಶ್ರಮಿಸಲಾಗುವುದು ಎಂದರು.

ಪಂಚಮಸಾಲಿ 2ಎ ಮೀಸಲಾತಿ ಅನುಷ್ಠಾನಕ್ಕೆ ಬೆಂಬಲ ನೀಡಿದ ರಮೇಶ ಜಾರಕಿಹೊಳಿ

ಲಿಂಗಾಯತ ಸಮುದಾಯವು ನನ್ನ ಬೆಂಬಲಕ್ಕೆ ಸದಾ ನಿಂತಿದ್ದು, ಹೀಗಾಗಿ ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಪಕ್ಷಾತೀತವಾಗಿ ಬೆಂಬಲ ನೀಡಲಾಗುವುದು ಎಂದರು.

ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಇದ್ದಾಗ ವಿನಯ ಕುಲಕರ್ಣಿ ಜತೆಗೆ ನನಗೂ‌ ಸಚಿವ ಸ್ಥಾನ ನೀಡುವಂತೆ, ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನನ್ನ ಪರವಾಗಿ ದಿಗ್ವಿಜಯ ಸಿಂಗ್ ಅವರಿಗೆ ಮನವಿ ಮಾಡಿಕೊಂಡಿದ್ದರು ಎಂದು ಸಚಿವ ರಮೇಶ ಜಾರಕಿಹೊಳಿ‌ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.