ಬೆಳಗಾವಿ: ಜಿಲ್ಲೆಯ ಮೂವರಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿರುವುದರಿಂದ ಕುಂದಾನಗರಿಯಲ್ಲಿ ತಲ್ಲಣ ಮೂಡಿಸಿದೆ.
ಈ ಮಧ್ಯೆ ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್‌ನಲ್ಲಿರುವ ವ್ಯಕ್ತಿ ಡ್ಯಾನ್ಸ್ ಮಾಡಿದ್ದಾನೆ.
ಆಸ್ಪತ್ರೆಯಲ್ಲಿ ಸೋಂಕಿತರನ್ನು ಪ್ರತ್ಯೇಕವಾಗಿಟ್ಟಿಲ್ಲ. ಕೊರೊನಾ ಸೋಂಕಿತರು ಹಾಗೂ ಇತರೆ ರೋಗಿಗಳು ಒಂದೇ ಕೊಠಡಿಯಲ್ಲಿ ಇದ್ದೇವೆ. ನಮ್ಮನ್ನು ಯಾವುದೇ ರೀತಿಯಲ್ಲಿ ಪರೀಕ್ಷೆಗೆ ಒಳಪಡಿಸಿಲ್ಲ. ಆದ್ರೆ, ಹೊರಗಡೆ ಮಾತ್ರ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಅಂತಾ ಹೇಳಲಾಗುತ್ತಿದೆ. ನಮಗೆ ಯಾವುದೇ ರೀತಿಯ ಚಿಕಿತ್ಸೆ ನೀಡುತ್ತಿಲ್ಲ ಅಂತ ಕೊರೊನಾ ಶಂಕಿತ ವ್ಯಕ್ತಿ ವಿಡಿಯೋದಲ್ಲಿ ಹೇಳಿದ್ದಾನೆ.