ಬೆಳಗಾವಿ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿಯೊಬ್ಬ ಹಿಂದಿನಿಂದ ಬಂದು ಆಟೋ ಚಾಲಕನ ಮೇಲೆ ಕಬ್ಬು ಕಟಾವು ಮಾಡುವ ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ರಾಮದುರ್ಗ ಪಟ್ಟಣದಲ್ಲಿ ನಡೆದಿದೆ.
ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ರವಿ ಪೂಜಾರ (28) ಹಲ್ಲೆಗೊಳಗಾದ ಆಟೋ ಚಾಲಕ. ಹಳೇ ದ್ವೇಷ ಸಂಬಂಧ ಚುಂಚನೂರ ಗ್ರಾಮದ ಯಲ್ಲಪ್ಪ ಕಲ್ಲನ್ನವರ (36) ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.
ರವಿ ಪೂಜಾರ ರಾಮದುರ್ಗ ಸರ್ಕಾರಿ ಆಸ್ಪತ್ರೆ ಎದುರಿರುವ ಹುತಾತ್ಮ ಸರ್ಕಲ್ನಿಂದ ಆಟೋದಲ್ಲಿ ಸಂಚರಿಸುವ ಸಂದರ್ಭದಲ್ಲಿ ಆರೋಪಿ ಯಲ್ಲಪ್ಪ ಹಿಂದಿನಿಂದ ಬಂದು ಕಬ್ಬು ಕಟಾವು ಮಾಡುವ ಮಚ್ಚಿನಿಂದ ತಲೆಯ ಹಿಂಬದಿಗೆ ಹಾಗೂ ಬೆನ್ನಿನ ಮೇಲೆ ಹಲ್ಲೆ ಮಾಡಿದ್ದಾನೆ. ಬಳಿಕ ಆರೋಪಿ ಪರಾರಿಯಾಗಿದ್ದಾನೆ.
ಸ್ಥಳೀಯರು ತಲೆಗೆ ಏಟು ಬಿದ್ದ ರವಿಯನ್ನು ಕೂಡಲೇ ಸರಕಾರಿ ಆಸ್ಪತ್ರೆಗೆ ದಾಖಲಿಸಿದರು.
ಈ ಕುರಿತು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.