ETV Bharat / state

ಮಾರಣಾಂತಿಕ ಹಲ್ಲೆಗೊಳಗಾದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು - Belgaum crime news

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಾಲ್ವರ ಗುಂಪೊಂದು ವ್ಯಕ್ತಿಯ ಮೇಲೆ ಮಾರಣಾಂತಿಕವಾಗಿ ತಲವಾರ್​ನಿಂದ ದಾಳಿ ನಡೆಸಿದೆ. ಪರಿಣಾಮ ಚಿಕಿತ್ಸೆ ಫಲಿಸದೆ ಆತ ಮೃತಪಟ್ಟಿದ್ದಾನೆ.

Talwar attack
ವ್ಯಕ್ತಿ ಸಾವು
author img

By

Published : May 7, 2020, 12:55 PM IST

ಬೆಳಗಾವಿ: ತಲವಾರ್​ ದಾಳಿಯಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

ಗೋಕಾಕ್ ನಿವಾಸಿ ಸಿದ್ದು ಕನಮಡ್ಡಿ ಚಿಕಿತ್ಸೆ ಫಲಿಸದೇ ಮೃತಪಟ್ಟ ವ್ಯಕ್ತಿ. ವೈಯಕ್ತಿಕ ದ್ವೇಷದ ಕಾರಣ ನಿನ್ನೆ ಸಂಜೆ ನಾಲ್ವರ ಗುಂಪು ಸಿದ್ದು ಕನಮಡ್ಡಿ ಅವರ ಮೇಲೆ ತಲವಾರಿನಿಂದ ಹಲ್ಲೆ ಮಾಡಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಸಿದ್ದು ಕನಮಡ್ಡಿ ಗೋಕಾಕ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಇಲ್ಲಿ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ್ದಾರೆ.

ಗೋಕಾಕ ನಗರದ ಸುನೀಲ್ ಮುರಕಿಭಾವಿ, ಕೇದಾರಿ ಜಾಧವ್, ಸಂತೋಷ ಚಿಗಡೊಳ್ಳಿ ಸೇರಿದಂತೆ ಇನ್ನಿತರರು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ‌. ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.