ಬೆಳಗಾವಿ: ಕಿತ್ತೂರು ಪಟ್ಟಣದಲ್ಲಿ ನಡೆದ ಕಿತ್ತೂರು ಉತ್ಸವ ನೋಡಿಕೊಂಡು ವಾಪಸ್ ಮನೆಗೆ ಬರುತ್ತಿದ್ದಾಗ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಿತ್ತೂರು ಪಟ್ಟಣದ ಹೊರವಲಯದ ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕೊರವಿಕೊಪ್ಪ ಗ್ರಾಮದ ಬಾಳಪ್ಪ ತಳವಾರ (33), ಕರೆಪ್ಪ ತಳವಾರ (36) ಮೃತಪಟ್ಟ ದುರ್ದೈವಿಗಳು. ಕಿತ್ತೂರು ಪಟ್ಟಣದ ಹೊರವಲಯದ ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಘಟನೆ ನಡೆದಿದೆ.
ಮಧ್ಯರಾತ್ರಿ 12 ಗಂಟೆಯ ಹೊತ್ತಿಗೆ ರಸ್ತೆ ದಾಟುತ್ತಿದ್ದ ಇವರಿಬ್ಬರ ಮೇಲೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಕಾರು ಧಾರವಾಡದ ಕಡೆಗೆ ಸಾಗುತ್ತಿತ್ತು ಎನ್ನಲಾಗಿದೆ. ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ತಂದೆ ಸಾವು: ಮಗು ನಾಮಕರಣ ಖುಷಿಯಲ್ಲಿದ್ದ ಮನೆಯಲ್ಲಿ ಶೋಕ