ಬೆಳಗಾವಿ: ಮಾರ್ಚ್ 10ರಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 21ನೇ ಘಟಿಕೋತ್ಸವ ಸಮಾರಂಭ ನಡೆಯಲಿದ್ದು, ತಂತ್ರಜ್ಞಾನದಲ್ಲಿ ಸಾಧನೆ ಮಾಡಿದ ಮೂವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ ಹೇಳಿದರು.
ವಿಟಿಯು ಸಭಾಂಗಣದಲ್ಲಿ ಮಾಧ್ಯಮದಗೋಷ್ಟಿಯಲ್ಲಿ ಮಾತನಾಡಿದ ಅವರು, 21ನೇ ಘಟಿಕೋತ್ಸವದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಲೋಕಸಭೆ ಸಭಾಪತಿ ಓಂ ಬಿರ್ಲಾ ಅವರು ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ನಾರಾಯಣ್ ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.
ಇದೇ ವೇಳೆ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೂವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ನೀಡಲಾಗುತ್ತದೆ. ಅದರಲ್ಲೂ ಇನ್ಫೋಸಿಸ್ ಸಹ ಸಂಸ್ಥಾಪಕ ಸೇನಾಪತಿ ಕ್ರಿಶ್ ಗೋಪಾಲಕೃಷ್ಣ, ಹೈದರಾಬಾದ್ನ ಭಾರತ್ ಬಯೋಟೆಕ್ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಡಾ.ಕೃಷ್ಣ ಎಲ್ಲ ಹಾಗೂ ಪದ್ಮಶ್ರೀ ಪುರಸ್ಕೃತರಾದ ಪ್ರೊ.ರೋಹಿಣಿ ಗೊಡಬೋಲೆ ಅವರಿಗೆ 'ಡಾಕ್ಟರ್ ಆಫ್ ಸೈನ್ಸ್' ಗೌರವ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಿದರು.
ಇದಲ್ಲದೇ ರ್ಯಾಂಕ್ ಪಡೆದಂತಹ 10 ವಿದ್ಯಾರ್ಥಿಗಳಿಗೆ ಘಟಿಕೋತ್ಸವದಲ್ಲಿ ಬಂಗಾರದ ಪದಕ ವಿತರಣೆ ಮಾಡಲಾಗುತ್ತದೆ. ವಿಶ್ವವಿದ್ಯಾಲಯ 21ನೇ ಘಟಿಕೋತ್ಸವದಲ್ಲಿ ಒಟ್ಟು 57,498 ಬಿಇ / ಬಿಟೆಕ್, 902 ಬಿ.ಆರ್ಚ್, 12 ಬಿ.ಪ್ಲೇನ್, 4362 ಎಂಬಿಎ, 1387 ಎಂಸಿಎ,1292 ಎಂಟೆಕ್,73 ಎಂಆರ್ಚ್, ಹಾಗೂ 33 ಪಿಜಿ ಡಿಪ್ಲೋಮಾ ಪದವಿಯನ್ನು ಪ್ರಧಾನ ಮಾಡಲಾಗುತ್ತಿದೆ. ಸಂಶೋಧನಾ ಅಧ್ಯಯನ ಮುಗಿಸಿದ ಸಂಶೋಧನಾರ್ಥಿಗಳಿಗೆ 515+ ಪಿಎಚ್ ಡಿ, 04 ಎಂಎಸ್ಸಿ ( ಎಂಜಿನಿಯರಿಂಗ್ ) ಬೈ ರಿಸರ್ಚ್ ಮತ್ತು 3ಇಂಟಿಗ್ರೇಟೆಡ್ ಡುಯಲ್ ಪದವಿ ಪ್ರಧಾನ ಮಾಡಲಾಗುವುದು ಎಂದರು.
ಇದನ್ನೂ ಓದಿ: ಶಿವಮೊಗ್ಗ ಗಲಭೆ ಪ್ರಕರಣ: ಈಶ್ವರಪ್ಪ, ರಾಘವೇಂದ್ರ ವಿರುದ್ಧವೂ ಕೇಸ್ ದಾಖಲಿಸುವಂತೆ ಡಿಸೋಜಾ ಒತ್ತಾಯ