ಬೆಳಗಾವಿ: ಸವದತ್ತಿ ತಾಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ನಾಲ್ಕು ವರ್ಷದ ಬಾಲಕನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮುರಗೋಡ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೊಲೆಯಾದ ಬಾಲಕನ ದೊಡ್ಡಪ್ಪನಾಗಿರುವ ಹಾರುಗೊಪ್ಪ ಗ್ರಾಮದ ಈರಪ್ಪ ಸಂಕಣ್ಣವರ (38) ಬಂಧಿತ ಆರೋಪಿ. ಆಸ್ತಿ ವಿಚಾರಕ್ಕೆ ತಮ್ಮನ ಮೇಲಿನ ಸೇಡಿಗೆ ಆತನ ಮಗನನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ.
ಕೊಲೆ ಮಾಡಿದ ನಾಲ್ಕು ದಿನದ ಬಳಿಕ ಬಂಧಿತ ಆರೋಪಿ ಈರಪ್ಪ ಮುನವಳ್ಳಿ ಗ್ರಾಮದಲ್ಲಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನ ಬಂಧಿಸಿ ನ್ಯಾಯಾಂಗ ತನಿಖೆಗೆ ಒಳಪಡಿಸಲಾಗಿದೆ ಎಂದು ಮುರಗೋಡ ಪಿಎಸ್‌ಐ ಪ್ರವೀಣ ಗಂಗೋಳ ತಿಳಿಸಿದ್ದಾರೆ.
ಜ.20 ರಂದು ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ 4 ವರ್ಷದ ಬಾಲಕನನ್ನು ಕೊಲೆ ಮಾಡಲಾಗಿತ್ತು. ಈ ಕುರಿತು ಮುರಗೋಡ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ನಾಲ್ಕು ದಿನಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ:ಬೆಳಗಾವಿ: ಆಸ್ತಿಗಾಗಿ ತಮ್ಮನ ಮಗನನ್ನೇ ಹತ್ಯೆ ಮಾಡಿದ ಪಾಪಿ ದೊಡ್ಡಪ್ಪ!