ಚಿಕ್ಕೋಡಿ: ನಗರದ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಲೋಕೋಪಯೋಗಿ ಇಲಾಖೆಯ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಲಾಯಿತು.
ಸಭೆಯಲ್ಲಿ ನಗರದ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಎಂ.ಎಲ್.ಸಿ ಮಹಾಂತೇಶ ಕವಟಗಿಮಠ ಭಾಗಿಯಾಗಿದ್ದರು. ಈ ಸಭೆಯಲ್ಲಿ ಎಸಿ ರವೀಂದ್ರ ಕರಲಿಂಗನ್ನವರ ಕೋವಿಡ್ 19 - ಬಗ್ಗೆ ಮಾಹಿತಿ ನೀಡಿದರು. ಕೋವಿಡ್-19 ಸಂಪರ್ಕಕ್ಕೆ ವಿದೇಶದಿಂದ ಇಲ್ಲಿಗೆ ಬಂದಿರುವ 156 ಜನರನ್ನೂ ಈಗಾಗಲೇ ಗುರುತಿಸಿದ್ದೇವೆ. ಅವರನ್ನು ತಪಾಸಣೆ ಮಾಡಿದಾಗ ಅವರ ವರದಿ ನೆಗೆಟಿವ್ ಇದೆ. ಹೀಗಾಗಿ ಅವರನ್ನು 14 ದಿನಗಳ ಕಾಲ ಹೋಮ್ ಕ್ವಾರಂಟೇನ್ನಲ್ಲೇ ಇರಿಸಲಾಗುತ್ತೆ ಎಂದು ಸಭೆಯಲ್ಲಿ ಮಾಹಿತಿ ನೀಡಿದರು.
ಈ ಕೋವಿಡ್ 19 ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಈಗಾಗಲೇ ಪ್ರಧಾನ ಮಂತ್ರಿ ಮೋದಿ ಅವರು 21 ದಿನಗಳವರೆಗೆ ದೇಶವನ್ನು ಲಾಕ್ ಡೌನ್ ಮಾಡಿದ್ದು, ಮಹಾರಾಷ್ಟ್ರದಲ್ಲಿ ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ 19 ಪಾಸಿಟಿವ್ ಬಂದಿದೆ. ಗಡಿ ಭಾಗದ ಚಿಕ್ಕೋಡಿ ಉಪವಿಭಾಗದಲ್ಲಿ ಬರುವ ಗಡಿಯಲ್ಲಿ ಹೆಚ್ಚಿನ ತಪಾಸಣೆ ಈಗಾಗಲೇ ಪ್ರಾರಂಭವಾಗಿದ್ದು, ರಾಜ್ಯದ ಎಲ್ಲ ಕಡೆಗೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಹೇಳಿದರು.