ETV Bharat / state

ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ

author img

By

Published : Jul 4, 2020, 8:48 PM IST

ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೂಲಿಯನ್ನು 600 ರೂಪಾಯಿಗೆ ಏರಿಕೆ ಮಾಡಿ, ವರ್ಷದಲ್ಲಿ ಕನಿಷ್ಠ 200 ದಿನಗಳ ಕಾಳ ಉದ್ಯೋಗ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಚಿಕ್ಕೋಡಿ ತಹಶೀಲ್ದಾರ್ ಮೂಲಕ ಪ್ರಧಾನಮಂತ್ರಿಗಳಿಗೆ ಸಿಐಟಿಯು ಕಾರ್ಯಕರ್ತರು ಮನವಿ ಸಲ್ಲಿಸಿದರು.

ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಸಿಐಟಿಯು ಮನವಿ

ಚಿಕ್ಕೋಡಿ: ಕಾರ್ಮಿಕರ ಬೇಡಿಕೆಗಳ ಕುರಿತು ಹಾಗೂ ನೊಂದ ಕುಟುಂಬಗಳಿಗೆ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಚಿಕ್ಕೋಡಿ ತಹಶೀಲ್ದಾರ್ ಶುಭಾಸ ಸಂಪಗಾಂವಿ ಮೂಲಕ ಪ್ರಧಾನಮಂತ್ರಿಗಳಿಗೆ ಸಿಐಟಿಯು (ಸೆಂಟರ್ ಆಫ್ ಇಂಡಿಯಾ ಟ್ರೇಡ್ ಯೂನಿಯನ್) ಕಾರ್ಯಕರ್ತರು ಮನವಿ ಸಲ್ಲಿಸಿದರು.

ಕೋವಿಡ್-19 ಸಾಂಕ್ರಾಮಿಕ ರೋಗವು ರಾಜ್ಯದಲ್ಲಿ ದಿನೇ ದಿನೆ ಹೆಚ್ಚುತ್ತಿದೆ. ಇದರಿಂದ ಜನಸಾಮಾನ್ಯರು, ದುಡಿಯುವ ಜನರ ಬದುಕು ದುಸ್ತರವಾಗಿದೆ. ಆದ್ದರಿಂದ ದೇಶದ ಎಲ್ಲಾ ಕುಟುಂಬಗಳಿಗೆ ತಿಂಗಳಿಗೆ ರೂ. 7500ನಂತೆ 6 ತಿಂಗಳವರೆಗೆ ನಗದು ವರ್ಗಾವಣೆ ಮಾಡಬೇಕು. ಪ್ರತಿ ವ್ಯಕ್ತಿಗೆ ತಿಂಗಳಿಗೆ 10 ಕೆಜಿಯಂತೆ 6 ತಿಂಗಳ ಪಡಿತರ ನೀಡಬೇಕು. ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೂಲಿಯನ್ನು 600 ರೂಪಾಯಿಗೆ ಏರಿಕೆ ಮಾಡಿ, ವರ್ಷದಲ್ಲಿ ಕನಿಷ್ಠ 200 ದಿನಗಳ ಕಾಲ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದರು.

ನಗರದ ನಿರುದ್ಯೋಗಿಗಳಿಗೆ ತಕ್ಷಣವೇ ನಿರುದ್ಯೋಗ ಭತ್ಯೆ ಪ್ರಕಟಿಸಬೇಕು. ರಾಷ್ಟ್ರೀಯ ಆಸ್ತಿಗಳ ಲೂಟಿ, ಸಾರ್ವಜನಿಕ ವಲಯದ ಖಾಸಗೀಕರಣ, ಕಾರ್ಮಿಕ ಕಾನೂನುಗಳ ರದ್ಧತಿಯನ್ನು ನಿಲ್ಲಿಸಬೇಕು. ಕರ್ನಾಟಕದಲ್ಲಿ ಆರೋಗ್ಯ ಪರಿಕರಗಳು, ವೆಂಟಿಲೇಟರ್​, ಅಗತ್ಯ ಔಷಧಿಗಳ ತೀವ್ರ ಕೊರತೆ ಇದ್ದು, ಅವುಗಳನ್ನು ಗರಿಷ್ಠ ಪ್ರಮಾಣದಲ್ಲಿ ರಾಜ್ಯಕ್ಕೆ ಪೂರೈಸಬೇಕು. ಪೆಟ್ರೋಲ್-ಡೀಸೆಲ್​ ಬೆಲೆ ಇಳಿಸುವಂತೆ ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.