ETV Bharat / state

ಸಾಮಾನ್ಯ ಜನರಂತೆ ಮತದಾನ ಮಾಡಿದ ಜಿಲ್ಲೆಗಳ ಪ್ರಮುಖ ಅಭ್ಯರ್ಥಿಗಳು

ರಾಜ್ಯದಲ್ಲಿ ಎರಡನೇ ಹಂತದ ಮತದಾನ ಮುಕ್ತಾಯಗೊಂಡಿದೆ. ವಿವಿಧ ಜಿಲ್ಲೆಗಳಲ್ಲಿ ಭಾಗಶಃ ಶಾಂತಿಯುತ ಮತದಾನವಾಗಿದ್ದು, ಮತದಾರರು ಅಭ್ಯರ್ಥಿಗಳ ಭವಿಷ್ಯ ಬರೆದಿದ್ದಾರೆ. ಇದರೊಂದಿಗೆ ವಿವಿಧ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳೂ ಸಹ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ.

ಅಭ್ಯರ್ಥಿಗಳು ಹಾಗೂ ಪ್ರಮುಖರಿಂದ ಮತದಾನ
author img

By

Published : Apr 24, 2019, 12:49 AM IST

ಚಿಕ್ಕೋಡಿ/ ಧಾರವಾಡ/ ರಾಯಚೂರು/ ಬೀದರ್​/ ಬೆಳಗಾವಿ: ರಾಜ್ಯದ ವಿವಿಧ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಆಯಾ ಕ್ಷೇತ್ರಗಳಲ್ಲಿ ಹಕ್ಕು ಚಲಾಯಿಸಿದರು. ಇವರೊಂದಿಗೆ ಕುಟುಂಬಸ್ಥರು ಹಾಗೂ ಪ್ರಮುಖ ನಾಯಕರೂ ಜೊತೆಗೂಡಿ ಮತ ಚಲಾಯಿಸಿದರು.

ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ಕುಟುಂಬ ಸಮೇತ ಮತಗಟ್ಟೆಗೆ ಆಗಮಿಸಿ ಪತ್ನಿ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಇಬ್ಬರು ಪುತ್ರರೊಡನೆ ಚಿಕ್ಕೋಡಿ ತಾಲೂಕಿನ ಎಕ್ಸಂಬಾ ಗ್ರಾಮದಲ್ಲಿ ಮತ ಚಲಾಯಿಸಿದರು.

ಎಕ್ಸಂಬಾ ಗ್ರಾಮದ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಈ ಚುನಾವಣೆಯಲ್ಲಿ ಒಂದು ಲಕ್ಷ ಮತಗಳಿಂದ ವಿಜಯಶಾಲಿಯಾಗುತ್ತೇನೆ. ಸಾಮಾಜಿಕ ಜಾಲತಾಣಗಳಲ್ಲಿ ನನ್ನ ವಿರೋಧಿಗಳು ಸುಳ್ಳು ಸುದ್ದಿಗಳನ್ನು ಎಡಿಟ್ ಮಾಡಿ ಹಾಕುತ್ತಿದ್ದಾರೆ. ಅವರು ಸೋಲುವ ಭಯದಲ್ಲಿ ಈ ರೀತಿಯಾಗಿ ಮಾಡುತ್ತಿದ್ದಾರೆ ಎಂದು ಹೇಳಿದರು.

ನಿಪ್ಪಾಣಿ ಶಾಸಕಿ ಶಸಿಕಲಾ ಜೊಲ್ಲೆ ಮಾಧ್ಯಮದವರ ಜೊತೆ ಮಾತನಾಡಿ, ಅಣ್ಣಾಸಾಹೇಬ ಜೊಲ್ಲೆ ಅವರ ಗೆಲವು ನೂರಕ್ಕೆ ನೂರು ಪ್ರತಿಶತ ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಿಕ್ಕೋಡಿಯಲ್ಲಿ ಬಿಜೆಪಿ‌ ಗೆಲ್ಲುತ್ತದೆ: ಪ್ರಭಾಕರ ಕೋರೆ

ಮಂಬೈ ಕರ್ನಾಟಕದಲ್ಲಿ ಕಳೆದ ಚುನಾವಣೆಯಲ್ಲಿ ಏಳು ಕ್ಷೇತ್ರದಲ್ಲಿ ನಮ್ಮ ಚಿಕ್ಕೋಡಿ ಹೊರತುಪಡಿಸಿ ಆರು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದ್ದು, ಈ ಬಾರಿ‌ ಏಳು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ನೀರಿಕ್ಷೆ ಇದೆ ಎಂದು ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಹೇಳಿದರು.

ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಮರಾಠಿ ಹೆಣ್ಣು ಮಕ್ಕಳ ಶಾಲೆಯಲ್ಲಿ ಮತದಾನ ಮಾಡಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹೈದರಾಬಾದ್​​ ಕರ್ನಾಟಕ ಭಾಗದಲ್ಲಿ ಕೂಡ ಏಳು ಲೋಕಸಭಾ ಕ್ಷೇತ್ರಗಳಿದ್ದು, ಅಲ್ಲಿ ಆರು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವುದು ನಿಶ್ಚಿತ. ಮಲ್ಲಿಕಾರ್ಜುನ ಖರ್ಗೆ ಅವರು ಸೋಲುವುದು ನಿಶ್ಚಿತ ಎಂದು ಹೇಳಿದರು.

ಅಭ್ಯರ್ಥಿಗಳು ಹಾಗೂ ಪ್ರಮುಖರಿಂದ ಮತದಾನ

ದಿ. ಸಿ.ಎಸ್.ಶಿವಳ್ಳಿ ಪತ್ನಿ ಕುಸುಮಾ ಶಿವಳ್ಳಿಯಿಂದ ಮತದಾನ:

ಇತ್ತೀಚೆಗೆ ಅಕಾಲಿಕ ನಿಧನ ಹೊಂದಿದ ಶಿವಳ್ಳಿ ಅವರ ಪತ್ನಿ ಕುಸುಮಾ ಅವರು ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಕುಟುಂಬಸ್ಥರೊಂದಿಗೆ ಆಗಮಿಸಿ ಹಕ್ಕು ಚಲಾಯಿಸಿದರು.

ರಾಮದುರ್ಗ ಶಾಸಕ ಮಹದೇವಪ್ಪ ಯಾದವಾಡರಿಂದ ಮತದಾನ:

ಬೆಳಗಾವಿ ಜಿಲ್ಲೆ ರಾಮದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಮಹದೇವಪ್ಪ ಯಾದವಾಡ ತಾಲೂಕಿನ ಬಟಕುರ್ಕಿ ಗ್ರಾಮದಲ್ಲಿ ಜನಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಶಾಸಕರ ಸ್ವಗ್ರಾಮವಾದ ಬಟಕುರ್ಕಿಯಲ್ಲಿ ಮತದಾನ ಮಾಡಿದ ಮಹಾದೇವಪ್ಪ ಯಾದವಾಡ ಬಿಜೆಪಿ ಪ್ರಭಾವಿ ಮುಖಂಡರಲ್ಲಿ ಒಬ್ಬರು.

ರಾಯಚೂರು ಜಿಲ್ಲೆಯ ಪ್ರಮುಖ ನಾಯಕರಿಂದ ಮತದಾನ:

ಜಿಲ್ಲೆಯಲ್ಲಿ ಇಂದು ಪ್ರಮುಖ ನಾಯಕರು ತಮ್ಮ ಹಕ್ಕನ್ನು ಚಲಾಯಿಸಿದ್ರು. ಮೈತ್ರಿ ಪಕ್ಷದ ಅಭ್ಯರ್ಥಿ ಬಿ.ವಿ. ನಾಯಕ ದೇವದುರ್ಗ ತಾಲೂಕಿನ ಅರಕೇರಾ ಗ್ರಾಮದಲ್ಲಿ ಮತದಾನ ಮಾಡಿದ್ರು. ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕರು ತಮ್ಮ ಪತ್ನಿಯೊಡನೆ ಲಿಂಗಸೂಗೂರು ತಾಲೂಕಿನ ಗುರುಗುಂಟಾ ಗ್ರಾಮದಲ್ಲಿ ಮತ ಚಲಾಯಿಸಿದ್ರು. ರಾಯಚೂರು ಜಿಲ್ಲಾ ಉಸ್ತುವರಿ ಸಚಿವ ವೆಂಟಕರಾವ್ ನಾಡಗೌಡ ಮತ್ತು ಪತ್ನಿ ಜತೆಗೆ ಸಿಂಧನೂರು ಪಟ್ಟಣದಲ್ಲಿ ಮತಗಟ್ಟೆ ತೆರಳಿ ಮತ ಚಲಾಯಿಸಿದ್ರು.

ದೇವದುರ್ಗ ಶಾಸಕ ಕೆ. ಶಿವನಗೌಡ ನಾಯಕ ಅರಕೇರಾದಲ್ಲಿ ಮತ ಚಲಾಯಿಸಿದ್ರೆ, ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜ್, ನಗರದ ಕೆಇಬಿ ಶಾಲೆಯಲ್ಲಿ ಮತ ಚಲಾಯಿಸಿದ್ರು. ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ್ರು.

ಬಿಜೆಪಿ ಶಾಸಕ ಪ್ರಭು ಚವ್ಹಾಣ ಕುಟುಂಬ ಸಮೇತ ಮತಚಲಾವಣೆ..!

ಬೀದರ್ ಜಿಲ್ಲೆಯ ಏಕೈಕ ಬಿಜೆಪಿ ಶಾಸಕ ಪ್ರಭು ಚವ್ಹಾಣ ಪತ್ನಿ ಹಾಗೂ ಮಗನೊಂದಿಗೆ ಮತಗಟ್ಟೆಗೆ ಆಗಮಿಸಿ ಮತ ಚಲಾವಣೆ ಮಾಡಿದರು. ಜಿಲ್ಲೆಯ ಔರಾದ ತಾಲೂಕಿನ ಬೊಂತಿ ಮತಗಟ್ಟೆಯಲ್ಲಿ ಪುತ್ರ ಪ್ರತಿಕ್​​ ಹಾಗೂ ಪತ್ನಿಯೊಂದಿಗೆ ಮತಗಟ್ಟೆಗೆ ಬಂದು ಮತ ಚಲಾಯಿಸಿದ್ರು.

Intro:ಚಿಕ್ಕೋಡಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ಮತ ಚಲಾವಣೆBody:

ಚಿಕ್ಕೋಡಿ :
ಕುಂಟುಂಬ ಸಮೇತ ಮತ ಚಲಾಯಿಸಿದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ಪತ್ನಿ, ನಿಪ್ಪಾಣಿ ಶಾಶಕಿ ಶಶಿಕಲಾ ಜೊಲ್ಲೆ ಹಾಗೂ ಇಬ್ಬರು ಪುತ್ರರೊಡನೆ ಚಿಕ್ಕೋಡಿ ತಾಲೂಕಿನ ಎಕ್ಸಂಬಾ ಗ್ರಾಮದಲ್ಲಿ ಮತ ಚಲಾಯಿಸಿದರು.

ಎಕ್ಸಂಬಾ ಗ್ರಾಮದ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ ಈ ಚುನಾವಣೆಯಲ್ಲಿ ಒಂದು ಲಕ್ಷ ಮತಗಳಿಂದ ವಿಜಯಶಾಲಿಯಾಗುತ್ತೇನೆ. ಸಾಮಾಜಿಕ ಜಾಲತಾಣಗಳಲ್ಲಿ ನನ್ನ ವಿರೋದಿಗಳು ಸುಳ್ಳು ಸುದ್ದಿಗಳ ನ್ನು ಎಡಿಟ್ ಮಾಡಿ ಹಾಕುತ್ತಿದ್ದಾರೆ ಅವರಿಗೆ ಸೋಲುವ ಭಯದಲ್ಲಿ ಈ ರೀತಿಯಾಗಿ ಮಾಡುತ್ತಿದ್ದಾರೆ ಎಂದು ಹೇಳಿದರು.

ನಿಪ್ಪಾಣಿ ಶಾಸಕಿ ಶಸಿಕಲಾ ಜೊಲ್ಲೆ ಮಾಧ್ಯಮದವರ ಜೊತೆ ಮಾತನಾಡಿ ಅಣ್ಣಾಸಾಹೇಬ ಜೊಲ್ಲೆ ಅವರ ಗೆಲವು ನೂರಕ್ಕೆ ನೂರಾ ಒಂದು ಪ್ರತಿಶತ ಗೆಲವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Conclusion:ಸಂಜಯ ಕೌಲಗಿ‌
ಚಿಕ್ಕೋಡಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.