ಚಿಕ್ಕೋಡಿ : ನವಜಾತ ಶಿಶುವನ್ನು ನಿರ್ದಯಿ ತಾಯಿಯೊಬ್ಬಳು ದೇವಸ್ಥಾನದಲ್ಲಿ ಬಿಟ್ಟು ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ರಾಯಬಾಗ ತಾಲೂಕಿನ ಮುಗಳಖೋಡ ಗ್ರಾಮದ ಹೊರ ವಲಯದ ಬಸವೇಶ್ವರ ದೇವಸ್ಥಾನದಲ್ಲಿ ಆಗಷ್ಟೇ ಹುಟ್ಟಿದ ಮಗುವನ್ನ ಕೈಚೀಲದಲ್ಲಿ ಹಾಕಿ ಬಿಟ್ಟು ಹೋಗಿದ್ದಾರೆ. ಸ್ಥಳಕ್ಕೆ ಹಾರೂಗೇರಿ ಪೊಲೀಸರು ಹಾಗೂ ಸಿಡಿಪಿಒ ಭೇಟಿ ನೀಡಿ ಮಗುವಿನ ರಕ್ಷಣೆ ಮಾಡಿದ್ದಾರೆ.
ರಾಯಬಾಗ ತಾಲೂಕು ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿನ ತಾಯಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.