ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮತದಾನ ವೇಳೆ ಎಂಇಎಸ್ನ ಕೇಲ ಕಿಡಿಗೇಡಿಗಳು ಎಂಇಎಸ್ ಅಭ್ಯರ್ಥಿ ಶುಭಂ ಶೆಳಕೆಗೆ ಮತದಾನ ಮಾಡುತ್ತಿರುವ ವಿಡಿಯೋವನ್ನ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದಾರೆ.
ಮತ ಯಂತ್ರದಲ್ಲಿ ಎಂಇಎಸ್ ಅಭ್ಯರ್ಥಿ ಶುಭಂ ಶೆಳಕೆಗೆ ಮತ ಹಾಕುತ್ತಾ ವಿಡಿಯೋ ಮಾಡಿದ್ದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಂಚಲನ ಮೂಡಿಸುತ್ತಿದೆ.
ಈ ವಿಡಿಯೋ ಬಗ್ಗೆ ಅನೇಕ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಓದಿ : ಉಪಚುನಾವಣೆ LIVE UPDATES: ಎಂಇಎಸ್ ಅಭ್ಯರ್ಥಿಗೆ ಮತ ಹಾಕುವ ವಿಡಿಯೋ ವೈರಲ್