ETV Bharat / state

ಬೆಳಗಾವಿಯಲ್ಲಿ ಮ. 12 ಗಂಟೆಯವರೆಗೆ ಮಾತ್ರ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ

ನಿನ್ನೆ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿದ್ದು, ಇಂದು ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶವಿದೆ ಎಂದು ಡಿಸಿಪಿ ಡಾ.ವಿಕ್ರಮ ಆಮಟೆ ಹೇಳಿದ್ದಾರೆ.

12 ಗಂಟೆಯವರೆಗೆ ಮಾತ್ರ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ

author img

By

Published : Aug 7, 2021, 10:49 AM IST

ಬೆಳಗಾವಿ: ಕೋವಿಡ್ ನಿಯಂತ್ರಣಕ್ಕಾಗಿ ನಗರದಲ್ಲಿ ನಿನ್ನೆಯಿಂದ ನೈಟ್ ಕರ್ಫ್ಯೂ ಹಾಗೂ ವೀಕೆಂಡ್​ ಕರ್ಫ್ಯೂ ಜಾರಿ ಮಾಡಲಾಗಿದ್ದು, ಇಂದು ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶವಿದೆ ಎಂದು ಡಿಸಿಪಿ ಡಾ. ವಿಕ್ರಮ ಆಮಟೆ ಹೇಳಿದ್ದಾರೆ.

ಡಿಸಿಪಿ ಡಾ.ವಿಕ್ರಮ ಆಮಟೆ ಹೇಳಿಕೆ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೀಕೆಂಡ್​ ಕರ್ಫ್ಯೂ ವೇಳೆ ಹೋಟೆಲ್ ಗಳಲ್ಲಿ ಪಾರ್ಸಲ್ ತೆಗೆದುಕೊಳ್ಳಲು ಅವಕಾಶವಿದೆ. ಬೇರೆ ಊರುಗಳಿಗೆ ತೆರಳುವ ಜನರು ಬಸ್ ಹಾಗೂ ರೈಲು ಟಿಕೆಟ್ ಗಳನ್ನು ತೋರಿಸಬೇಕು. ಮದುವೆ ಸಮಾರಂಭಗಳಿಗೆ ಅವಕಾಶ ನೀಡಲಾಗಿದ್ದು, ಕಾರ್ಯಕ್ರಮದಲ್ಲಿ 100 ಜನರಿಗೆ ಅವಕಾಶ ಒದಗಿಸಲಾಗಿದೆ. ಎಲ್ಲರೂ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದರು.

ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ಎಚ್ಚರಿಕೆ ನೀಡಿದರು. ಇದಲ್ಲದೇ ಮಾಂಸಹಾರಿ, ಹಾಲು ಅಂಗಡಿ, ಮೀನು ಸೇರಿದಂತೆ ಇತರ ಅಗತ್ಯ ಸೇವೆಗಳಲ್ಲಿ ಬರುವ ಅಂಗಡಿಗಳನ್ನು ತೆರೆಯಲು ಬೆಳಗ್ಗೆ 5 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಬಾರ್‌ಗಳ ಮುಂದೆ ಮದ್ಯಪ್ರಿಯರ ಕ್ಯೂ :

ಶುಕ್ರವಾರ ರಾತ್ರಿ 9 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಜಾರಿ ಹಿನ್ನೆಲೆ ನಗರದಲ್ಲಿ ಮದ್ಯದ ಅಂಗಡಿಗಳ ಎದುರು ಮದ್ಯ ಪ್ರಿಯರು ಸರತಿ ಸಾಲಿನಲ್ಲಿ ನಿಂತು ಎಣ್ಣೆ ಖರೀದಿಸಲು ಮುಗಿಬಿದ್ದಿದ್ದಾರೆ. ನಗರದ ಕೊಲ್ಲಾಪುರ ಸರ್ಕಲ್ ಸೇರಿದಂತೆ ಬಹುತೇಕ ಮದ್ಯದಂಗಡಿಗಳಲ್ಲಿ ಮದ್ಯಪ್ರಿಯರು ಸರತಿ ಸಾಲಿನಲ್ಲಿ ನಿಂತಿದ್ದರು.

ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವಾರಾಂತ್ಯದ ಕರ್ಫ್ಯೂ ಜಾರಿ ಇರುವುದರಿಂದ‌ ಸಾರಾಯಿ ತೆಗೆದುಕೊಳ್ಳಲು ಮದ್ಯವ್ಯಸನಿಗಳು ಮುಗಿಬಿದ್ದಿರುವ ದೃಶ್ಯಗಳು ಕಂಡುಬಂದವು.

ಇದನ್ನೂ ಓದಿ : ಗಡಿ ಜಿಲ್ಲೆಗಳಿಗೆ ವೀಕೆಂಡ್ ಕರ್ಫ್ಯೂ: ರಾಜ್ಯಾದ್ಯಂತ ನೈಟ್ ಕರ್ಫ್ಯೂ ವಿಸ್ತರಿಸಿ ಮಾರ್ಗಸೂಚಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.