ETV Bharat / state

ಭಾರತದ ಚುನಾವಣೆಗೆ ಜಗತ್ತೇ ಕಾತರದಿಂದ ಕಾಯುತ್ತಿದೆ: ಕೇಂದ್ರ ಸಚಿವ ಹರ್ಷವರ್ಧನ್ - ಚುನಾವಣೆ

ನರೇಂದ್ರ ಮೋದಿಯಂತಹ ಶ್ರೇಷ್ಠ ನಾಯಕತ್ವದಿಂದ ಇಡೀ ಜಗತ್ತೇ ಭಾರತದ ಚುನಾವಣೆಯತ್ತ ಮುಖ ಮಾಡಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಹರ್ಷವರ್ಧನ್ ತಿಳಿಸಿದರು.

ಕೇಂದ್ರ ಸಚಿವ ಹರ್ಷವರ್ಧನ್
author img

By

Published : Mar 24, 2019, 3:08 PM IST

ಬೆಳಗಾವಿ: ನರೇಂದ್ರ ಮೋದಿಯವರ ಆಡಳಿತ ವೈಖರಿ ಹಾಗೂ ಭಾರತದ ಅಭಿವೃದ್ಧಿಯಿಂದ ದೇಶದ ಚುನಾವಣೆ ಇಡೀ ಜಗತ್ತಿನ ಗಮನ ಸೆಳೆದಿದೆ. ಮೋದಿ ಮತ್ತೊಮ್ಮೆ ಪ್ರಧಾನಿ ಆಗುತ್ತಾರೆ ಎಂದು ಕೇಂದ್ರ ಸಚಿವ ಡಾ. ಹರ್ಷವರ್ಧನ್ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಪಂಚದ 20 ದೇಶಗಳಲ್ಲಿ ಚುನಾವಣೆ ನಡೆಯುತ್ತಿದೆ. ಆದರೆ ನರೇಂದ್ರ ಮೋದಿಯಂತಹ ಶ್ರೇಷ್ಠ ನಾಯಕತ್ವದಿಂದ ಇಡೀ ಜಗತ್ತೇ ಭಾರತದ ಚುನಾವಣೆಯತ್ತ ಮುಖ ಮಾಡಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದರು.

ಕೇಂದ್ರ ಸಚಿವ ಹರ್ಷವರ್ಧನ್

ಯಡಿಯೂರಪ್ಪ ಡೈರಿ ವಿಚಾರ ಸದ್ಯಕ್ಕೆ ಅಪ್ರಸ್ತುತ:

ಕೇಂದ್ರದ ಬಿಜೆಪಿ ನಾಯಕರಿಗೆ ಬಿಎಸ್​ವೈ ಹಣ ನೀಡಿದ್ದಾರೆ ಎನ್ನಲಾದ ಡೈರಿ ವಿಚಾರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಹರ್ಷವರ್ಧನ್​ ಅವರು, ಕಾಂಗ್ರೆಸ್ ಯಾವತ್ತಿಗೂ ಸುಳ್ಳು ಆರೋಪ ಮಾಡುವುದರಲ್ಲಿ ಎತ್ತಿದ ಕೈ. ರಫೇಲ್ ಹಗರಣ ಹಾಗೂ ಡೈರಿ ವಿಚಾರ ಈಗ ಅಪ್ರಸ್ತುತ. ಅದರ ಬಗ್ಗೆ ಪ್ರತಿಕ್ರಿಯೆ ನೀಡಿದರೆ ಸಮಯ ವ್ಯರ್ಥ ಎಂದರು.

ಮೋದಿ ಕರ್ನಾಟಕದಿಂದ ಸ್ಪರ್ಧಿಸುವುದು ಕೇವಲ ಊಹಾಪೋಹ:

ಮೋದಿ ಕರ್ನಾಟಕದಿಂದ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹ ಕುರಿತು ಮಾತನಾಡಿದ ಸಚಿವರು, ಇದು ಕೇವಲ ವದಂತಿ. ನನಗೆ ಈ ಕುರಿತು ಯಾವುದೇ ಮಾಹಿತಿ ಇಲ್ಲ. ಊಹಾಪೋಹಗಳಿಗೆ ಪ್ರತಿಕ್ರಿಯಿಸಲ್ಲ ಎಂದರು.

ಕರ್ನಾಟಕದಲ್ಲಿ ಕ್ಲೀನ್ ಸ್ವಿಪ್:

ಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಜಯ ಗಳಿಸಲಿದೆ. ಇಲ್ಲಿ ಪಕ್ಷ ಸಂಘಟನೆ ಪ್ರಬಲವಾಗಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದು ಹರ್ಷವರ್ಧನ್ ವಿಶ್ವಾಸ ವ್ಯಕ್ತಪಡಿಸಿದರು.

ಭಾರತದ ಚುನಾವಣೆಗೆ ಜಗತ್ತು ಕಾತರದಿಂದ ಕಾಯುತ್ತಿದೆ - ಕೇಂದ್ರ ಸಚಿವ ಡಾ. ಹರ್ಷವರ್ಧನ್ ಬೆಳಗಾವಿ : ನರೇಂದ್ರ ಮೋದಿಯವರ ಆಡಳಿತ ವೈಖರಿ ಹಾಗೂ ಭಾರತದ ಅಭಿವೃದ್ಧಿಯಿಂದ ದೇಶದ ಚುನಾವಣೆ ಇಡೀ ಜಗತ್ತಿನ ಗಮನ ಸೆಳೆದಿದ್ದು. ಮೋದಿ ಮತ್ತೊಮ್ಮೆ ಪ್ರಧಾನಿ ಆಗುತ್ತಾರೆ ಎಂದು ಕೇಂದ್ರ ಸಚಿವ ಡಾ. ಹರ್ಷವರ್ಧನ್ ಅಭಿಪ್ರಾಯ ಹಂಚಿಕೊಂಡರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು. ಪ್ರಪಂಚದಲ್ಲಿ 20 ದೇಶಗಳಲ್ಲಿ ಚುನಾವಣೆ ನಡೆಯುತ್ತಿದೆ ಆದರೆ ನರೇಂದ್ರ ಮೋದಿಯಂತಹ ಶ್ರೇಷ್ಠ ನಾಯಕತ್ವದಿಂದ ಇಡೀ ಜಗತ್ತೆ ಭಾರತದ ಚುನಾವಣೆಯತ್ತ ಮುಖ ಮಾಡಿದ್ದು. 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದರು. ಯಡಿಯೂರಪ್ಪ ಡೈರಿ ವಿಚಾರ ಇದು ಸದ್ಯಕ್ಕೆ ಅಪ್ರಸ್ತುತ : ಕೇಂದ್ರದ ಬಿಜೆಪಿ ನಾಯಕರಿಗೆ ಬಿಎಸ್ ವೈ ಹಣ ನೀಡಿದ್ದಾರೆ ಎನ್ನಲಾದ ಡೈರಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವರು. ಕಾಂಗ್ರೆಸ್ ಯಾವತ್ತಿಗೂ ಸುಳ್ಳು ಆರೋಪ ಮಾಡುವುದರಲ್ಲಿ ಎತ್ತಿದ ಕೈ. ರಾಫೆಲ್ ಹಗರಣ ಹಾಗೂ ಡೈರಿ ವಿಚಾರ ಈಗ ಅಪ್ರಸ್ತುತ ಅದರ ಬಗ್ಗೆ ಪ್ರತಿಕ್ರಿಯೆ ನೀಡಿದರೆ ಸಮಯ ಹಾಳಾಗುತ್ತದೆ ಎಂದರು. ಪ್ರಧಾನಿ ಮೋದಿ ಕರ್ನಾಟಕದಿಂದ ಸ್ಪರ್ಧೆ ಮಾಡುವುದು ಕೇವಲ ಊಹಾಪೋಹ : ಮೋದಿ ಕರ್ನಾಟಕದಿಂದ ಸ್ಪರ್ಧೆ ಮಾಡ್ತಾರೆ ಎಂಬ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವರು. ಪ್ರಧಾನಿ ಕರ್ನಾಟಕದಿಂದ ಸ್ಪರ್ಧೆ ಮಾಡ್ತಾರೆ ಎಂಬುದು ಕೇವಲ ವದಂತಿ. ನನಗೆ ಈ ಕುರಿತು ಯಾವುದೇ ಮಾಹಿತಿ ಇಲ್ಲ. ಊಹಾಪೋಹಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಕರ್ನಾಟಕದಲ್ಲಿ ಕ್ಲೀನ್ ಸ್ವಿಪ್ : ಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲಿದೆ. ಕರ್ನಾಟಕದಲ್ಲಿ ಪಕ್ಷ ಸಂಘಟನೆ ಪ್ರಲವಾಗಿದ್ದು ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು. ಕೇಂದ್ರ ಸಚಿವ ಡಾ. ಹರ್ಷವರ್ಧನ್ ಅಭಿಪ್ರಾಯಪಟ್ಟರು. ವಿನಾಯಕ ಮಠಪತಿ ಬೆಳಗಾವಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.