ETV Bharat / state

ಅಥಣಿ ತಾಲೂಕಿನಲ್ಲಿ ಹೆಚ್ಚುತ್ತಿದೆ ಕಳ್ಳತನ ಪ್ರಕರಣ: ಗ್ರಾಮಗಳಲ್ಲಿ ಎಚ್ಚರಿಕೆ ಡಂಗುರ

ಅಥಣಿ ತಾಲೂಕಿನಲ್ಲಿ ಒಂದು ತಿಂಗಳ ಅವಧಿಯಲ್ಲಿ ನಾಲ್ಕು ಗ್ರಾಮಗಳಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿವೆ. ತಾಲೂಕಿನ ಕೋಕಟನೂರ, ಸುಟ್ಟಟ್ಟಿ, ಶಿರಹಟ್ಟಿ, ಝುಂಜರವಾಡ ಗ್ರಾಮಗಳಲ್ಲಿ ದೇವಸ್ಥಾನ, ಬೀಗ ಹಾಕಿದ ಮನೆಗಳು, ಅಂಗಡಿ, ಬ್ಯಾಂಕ್​ಗಳಿಗೆ ಕಳ್ಳರು ಕನ್ನ ಹಾಕಿದ್ದರಿಂದ ತಾಲೂಕಿನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

author img

By

Published : Dec 12, 2020, 1:03 PM IST

athani
ಅಥಣಿ ತಾಲೂಕಿನಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣಗಳು: ಗ್ರಾಮಗಳಲ್ಲಿ ಎಚ್ಚರಿಕೆ ಡಂಗುರ

ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ದೇವಸ್ಥಾನ, ಮನೆಗಳಲ್ಲಿ ಬೆಳೆಬಾಳುವ ವಸ್ತುಗಳನ್ನು ಕಳ್ಳತನ ಮಾಡುವ ತಂಡವು ತಾಲೂಕಿನಲ್ಲಿ ಬೀಡುಬಿಟ್ಟಿದ್ದರಿಂದ, ಕಳ್ಳತನ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದ ಪೊಲೀಸ್​ ಇಲಾಖೆ ಮಾರ್ಗದರ್ಶನದಲ್ಲಿ ಗ್ರಾಮದ ಜನರಿಗೆ ಎಚ್ಚರಿಕೆಯಿಂದ ಇರಬೇಕೆಂದು ಡಂಗುರ ಸಾರಿ ಗ್ರಾಮಸ್ಥರಿಗೆ ಎಚ್ಚರಿಕೆ ನೀಡುತ್ತಿದ್ದಾರೆ.

ತಾಲೂಕಿನಲ್ಲಿ ಒಂದು ತಿಂಗಳ ಅವಧಿಯಲ್ಲಿ ನಾಲ್ಕು ಗ್ರಾಮಗಳಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿವೆ. ತಾಲೂಕಿನ ಕೋಕಟನೂರ, ಸುಟ್ಟಟ್ಟಿ, ಶಿರಹಟ್ಟಿ, ಝುಂಜರವಾಡ ಗ್ರಾಮಗಳಲ್ಲಿ ದೇವಸ್ಥಾನ, ಬೀಗ ಹಾಕಿದ ಮನೆಗಳು, ಅಂಗಡಿ, ಬ್ಯಾಂಕ್ ಗಳಿಗೆ ಕಳ್ಳರು ಕನ್ನ ಹಾಕಿದ್ದರಿಂದ ತಾಲೂಕಿನ ತುಂಬೆಲ್ಲಾ ಭಯದ ವಾತಾವರಣ ನಿರ್ಮಾಣವಾಗಿದೆ. ಇದರಿಂದಾಗಿ ಅಥಣಿ ಡಿವೈಎಸ್​ಪಿ ಎಸ್. ವಿ. ಗಿರೀಶ್ ಹಾಗೂ ಸಿಪಿಐ ಶಂಕರಗೌಡ ಬಸವನಗೌಡರ ಮಾರ್ಗದರ್ಶನದಲ್ಲಿ ತಾಲೂಕಿನ ಐಗಳಿ, ಕಾಗವಾಡ, ಅಥಣಿ ಪೊಲೀಸ್ ಠಾಣೆಯ ವ್ಯಾಪ್ತಿಯ ಗ್ರಾಮದಲ್ಲಿ ಡಂಗುರ ಸಾರಿ ಗ್ರಾಮಸ್ಥರಿಗೆ ಎಚ್ಚರಿಕೆ ನೀಡುತ್ತಿದ್ದಾರೆ.

ಓದಿ: ಶಿರಹಟ್ಟಿ ಗ್ರಾಮದಲ್ಲಿ ಸರಣಿ ಕಳ್ಳತನ; ಪೊಲೀಸರ ವಿರುದ್ಧ ಗ್ರಾಮಸ್ಥರ ಅಸಮಾಧಾನ

ಸದ್ಯ ನಾಲ್ಕು ಗ್ರಾಮದಲ್ಲಿ ಕಳ್ಳರ ತಂಡ ಕಳ್ಳತನ ಮಾಡಿ ಅಪಾರ ಪ್ರಮಾಣದ ಚಿನ್ನಾಭರಣ ದೋಚಿಕೊಂಡು ಹೋಗಿದೆ. ಅಂದಾಜು ಅರ್ಧ ಕೆ.ಜಿ ಚಿನ್ನ ಹಾಗೂ 400 ಗ್ರಾಂ ಬೆಳ್ಳಿಯನ್ನು ಕಳ್ಳರು ದೋಚಿದ್ದಾರೆ ಎಂಬ ಮಾಹಿತಿ ಇದೆ. ಇತ್ತ ಅಥಣಿ ಪೊಲೀಸರು ಸಿಸಿ ಟಿವಿ ದೃಶ್ಯ ಆಧರಿಸಿ ಆರೋಪಿಗಳ ಬೇಟೆಗೆ ಬಲೆ ಬೀಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.