ಬೆಳಗಾವಿ: ಇಂದು ಬೆಳ್ಳಂಬೆಳಗ್ಗೆ ತಾಲೂಕಿನ ಹಲಗಾ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಹಾಗೂ ಅತ್ತಿವಾಡ ಗ್ರಾಮದ ಹೊರವಲಯದಲ್ಲಿರುವ ಸಾತೇರಿ ದೇವಸ್ಥಾನದಲ್ಲಿ ದೇವರ ಮೇಲಿನ ಆಭರಣಗಳನ್ನು ಖದೀಮರು ಕಳ್ಳತನ ಮಾಡಿದ್ದಾರೆ.
ದೇವಿಯ ಮೂರ್ತಿಯ ಮೇಲೆ ತೊಡಿಸಿದ್ದ ಮಾಂಗಲ್ಯ ಸರ ಮತ್ತು ಮೂಗುತಿಯನ್ನು ಎಗರಿಸಿಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ ಎಂದಿನಂತೆ ಪೂಜಾರಿ ದೇವಸ್ಥಾನದ ಬಾಗಿಲು ತೆರೆಯಲು ಬಂದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಅರ್ಚಕರ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಹಿರೇಬಾಗೇವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.