ETV Bharat / state

ದೇಶದಲ್ಲಿ ಫೇರ್​​ ಅಂಡ್​​​ ಫ್ರೀ ಚುನಾವಣೆ ನಡೆಯುತ್ತಿಲ್ಲ: ದಿನೇಶ್​​ ಗುಂಡೂರಾವ್​​​ - ಅಮಿತ್ ಷಾ

ಬಿಜೆಪಿ ನಾಯಕರು ಐಟಿ ದುರ್ಬಳಕೆ ಮಾಡಿಕೊಂಡು ನಮ್ಮನ್ನು ಹೆದರಿಸಲಾಗುತ್ತಿದೆ. ಚುನಾವಣಾ ಆಯೋಗ ಸಹ ಏನು ಕ್ರಮ ಕೈಗೊಳ್ಳುತ್ತಿಲ್ಲ. ಐಟಿ ಅಷ್ಟೇ ಅಲ್ಲದೇ ಚುನಾವಣಾ ಆಯೋಗ ಕೂಡ ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್ ಗಂಭೀರವಾಗಿ ಆರೋಪಿಸಿದರು.

ದಿನೇಶ್​ ಗುಂಡೂರಾವ್
author img

By

Published : Apr 11, 2019, 7:26 PM IST

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್ ಗಂಭೀರವಾಗಿ ಆರೋಪಿಸಿದರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಐಟಿ ದುರ್ಬಳಕೆ ಮಾಡಿಕೊಂಡು ನಮ್ಮನ್ನು ಹೆದರಿಸಲಾಗುತ್ತಿದೆ. ಚುನಾವಣಾ ಆಯೋಗ ಸಹ ಏನು ಕ್ರಮ ಕೈಗೊಳ್ಳುತ್ತಿಲ್ಲ. ಐಟಿ ಅಷ್ಟೇ ಅಲ್ಲದೇ ಚುನಾವಣಾ ಆಯೋಗ ಕೂಡ ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ. ಸೋಲುವ ಭೀತಿಯಿಂದ ಬಿಜೆಪಿಯಿಂದ ಐಟಿ ದುರ್ಬಳಕೆ ಆಗುತ್ತಿದೆ ಎಂದು ಆರೋಪಿಸಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್

ಬಿಜೆಪಿಯವರೇನು ಸತ್ಯ ಹರಿಶ್ಚಂದ್ರರಲ್ಲ. ಕೇವಲ ಕಾಂಗ್ರೆಸ್- ಜೆಡಿಎಸ್ ಮುಖಂಡರ ‌ಆಪ್ತರ‌ ಮನೆಗಳ‌ ಮೇಲೆ ದಾಳಿ ನಡೆಯುತ್ತಿದೆ. ಈ ಸಂಬಂಧ ನಾವು ಹೋರಾಟ ನಡೆಸುತ್ತೇವೆ. ದೇಶದಲ್ಲಿ ಫೇರ್ ಅಂಡ್ ಫ್ರೀ ಚುನಾವಣೆ ನಡೆಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಧ್ಯಮಗಳ ವಿರುದ್ಧ ಸಿಎಂ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೆಲ ಸುದ್ದಿ ವಾಹಿನಿ ಹಾಗೂ ಪತ್ರಿಕೆಗಳು ಒಂದೇ ಪಕ್ಷದ ಪರವಾಗಿ ಸುದ್ದಿ ಮಾಡುತ್ತಿವೆ. ಮಾಧ್ಯಮ ಪ್ರತಿನಿಧಿಗಳಿಗೆ ರಕ್ಷಣೆ ನೀಡುವ ಜವಾಬ್ದಾರಿ ಸರ್ಕಾರದ ಮೇಲಿದೆ. ಯಾವುದೇ ಜರ್ನಲಿಸ್ಟ್ ಮೇಲೆ ಹಲ್ಲೆಯಾದ್ರೆ ಕಠಿಣ ಕ್ರಮ ಕೈಗೊಳ್ಳಬೇಕು. ಸಿಎಂ ಹೇಳಿಕೆಯನ್ನು ಬಿಜೆಪಿ ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಬಿಜೆಪಿ ಅವರು ಏನು ಬೇಕಾದರೂ ಮಾಡಲು ಸಿದ್ಧರಿದ್ದಾರೆ ಎಂದರು.

sample description
ETV Bharat Logo

Copyright © 2025 Ushodaya Enterprises Pvt. Ltd., All Rights Reserved.