ETV Bharat / state

ಬೆಳಗಾವಿ ಕಾಂಗ್ರೆಸ್​ನಲ್ಲಿ ಮುಸುಕಿನ ಗುದ್ದಾಟವಿಲ್ಲ: ಸಚಿವ ಸತೀಶ್​ ಜಾರಕಿಹೊಳಿ

ಬೆಳಗಾವಿಯಲ್ಲಿ ಪಕ್ಷದೊಳಗೆ ಮುಸುಕಿನ ಗುದ್ದಾಟ ಹಾಗು ಗೃಹಲಕ್ಷ್ಮೀ ಯೋಜನೆ ವಿಚಾರವಾಗಿ ಸಚಿವ ಸತೀಶ್​ ಜಾರಕಿಹೊಳಿ ಮಾತನಾಡಿದ್ದಾರೆ.

ಸಚಿವ ಸತೀಶ್​ ಜಾರಕಿಹೊಳಿ
ಸಚಿವ ಸತೀಶ್​ ಜಾರಕಿಹೊಳಿ
author img

By

Published : Aug 21, 2023, 5:30 PM IST

ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ

ಬೆಳಗಾವಿ : ಬೆಳಗಾವಿ ಜಿಲ್ಲಾ ಕಾಂಗ್ರೆಸ್​ನಲ್ಲಿ ಯಾವುದೇ ಮುಸುಕಿನ ಗುದ್ದಾಟ ಇಲ್ಲ ಎಂದು ಮಾಧ್ಯಮಗಳ ಪ್ರಶ್ನೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದರು. ಇಂದು (ಸೋಮವಾರ) ನಗರದ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನೂರು ನಿಗಮ, ಮಂಡಳಿಗಳಿಗೆ ಅಧ್ಯಕ್ಷ ಸ್ಥಾನ ನೀಡಬೇಕಿದೆ. ಕಾಂಗ್ರೆಸ್ ಪಕ್ಷದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕರ್ತರಿದ್ದಾರೆ. ಈ ಪೈಕಿ 50 ಶಾಸಕರಿಗೆ ಹಾಗೂ 50 ಕಾರ್ಯಕರ್ತರಿಗೆ ಕೊಡಲಾಗುವುದು. ಕಾರ್ಯಕರ್ತರಿಗೆ ನೀಡಿದರೆ, ಉಳಿದವರಿಗೆ ಸಂತೋಷವಾಗುತ್ತದೆ. ಎಲ್ಲರಿಗೂ ಸ್ಥಾನ ನೀಡಲು ಸಾಧ್ಯವಿಲ್ಲ ಎಂದರು.

ಇನ್ನು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಮೀಪವಾಗುವ ದೃಷ್ಟಿಯಿಂದ ಗೃಹ ಲಕ್ಷ್ಮೀ ಯೋಜನೆಯನ್ನು ಮೈಸೂರಿನಲ್ಲಿ ಆಯೋಜಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿ ಹಾಗೂ ಹೈಕಮಾಂಡ್ ನಿರ್ಣಯದ ಪ್ರಕಾರ, ಬೆಳಗಾವಿಯಲ್ಲಿ ಉದ್ಘಾಟನೆಯಾಗಬೇಕಿದ್ದ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ಮೈಸೂರಿನಲ್ಲಿ ನಡೆಯುತ್ತಿದೆ. ವಯನಾಡಿನಲ್ಲಿ ರಾಹುಲ್ ಗಾಂಧಿ ಅವರಿಗೆ ಬೇರೆ ಕಾರ್ಯಕ್ರಮ ಇದೆ. ಹಾಗಾಗಿ ಅವರಿಗೆ ಸಮೀಪವಾಗುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಗೃಹ ಲಕ್ಷ್ಮೀ ಯೋಜನೆ ರಾಜ್ಯಕ್ಕೆ ಸಂಬಂಧಿಸಿದ್ದು. ನಾನು ಕೂಡ ಮೈಸೂರಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದೇನೆ ಎಂದು ಹೇಳಿದರು.

ಬೆಳಗಾವಿ ವಿಭಜನೆ ವಿಚಾರ : ಬೆಳಗಾವಿ ಜಿಲ್ಲಾ ವಿಭಜನೆಯ ಕೂಗು ಜೋರಾಗಿದೆ. ಬೈಲಹೊಂಗಲ ಜಿಲ್ಲೆಗಾಗಿ ಹೋರಾಟ ಮಾಡುತ್ತಿದ್ದಾರೆ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಬೆಳಗಾವಿ ಜಿಲ್ಲೆಯ ವಿಭಜನೆ ಪ್ರಸ್ತಾಪ ಬಂದಾಗ, ನಮ್ಮ ತಾಲೂಕು ಜಿಲ್ಲೆಯಾಗಬೇಕೆಂದು ಕೇಳಲು ಎಲ್ಲರಿಗೂ ಅಧಿಕಾರ ಇದೆ. ಅಂತಿಮವಾಗಿ ಸರ್ಕಾರವೇ ಯಾವುದನ್ನು ಜಿಲ್ಲೆಯನ್ನಾಗಿ ಮಾಡಬೇಕೆಂದು ನಿರ್ಧರಿಸುತ್ತದೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಮಾತನಾಡಿದ ಸತೀಶ್​ ಜಾರಕಿಹೊಳಿ, ಎರಡ್ಮೂರು ಸಭೆ ಮಾಡಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ. ಜಾತಿ ಹಾಗೂ ಗೆಲ್ಲುವ ಅಭ್ಯರ್ಥಿಗಳಿಗೆ ಮಣೆ ಹಾಕಲಾಗುವುದು. ಈ ಕುರಿತು ಸಭೆಯಲ್ಲಿ ಚರ್ಚೆಯಾಗಬೇಕು. ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಪ್ರಕಾಶ ಹುಕ್ಕೇರಿ, ಲಕ್ಷ್ಮಣರಾವ್ ಚಿಂಗಳೆ ಆಕಾಂಕ್ಷಿಗಳಿದ್ದಾರೆ. ಬೆಳಗಾವಿಯಲ್ಲಿಯೂ ಸಾಕಷ್ಟು ಜನ ಇದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರನಿಗೆ ಟಿಕೆಟ್ ನೀಡುವ ವಿಚಾರ ನಮ್ಮ ಮುಂದೆ ಬಂದಿಲ್ಲ ಎಂದು ಹೇಳಿದರು.

ಬೆಳಗಾವಿಯ ಶಹಾಪುರ ಎಸ್​ಬಿಐ ಬ್ಯಾಂಕ್ ವೃತ್ತದಿಂದ ಹಳೆ ಪಿ.ಬಿ ರಸ್ತೆಯವರೆಗೆ ಸ್ಮಾರ್ಟ್ ಸಿಟಿಯಿಂದ ಕೈಗೊಂಡಿರುವ ರಸ್ತೆ ಅಗಲೀಕರಣ ಅವೈಜ್ಞಾನಿಕವಾಗಿದೆ. ಈಗಾಗಲೇ ನ್ಯಾಯಾಲಯ ಅನ್ಯಾಯಕ್ಕೊಳಗಾದ ಕುಟುಂಬದವರಿಗೆ ಪರಿಹಾರ ಕೊಡಬೇಕೆಂದು ಸೂಚನೆ ನೀಡಿದೆ ಎಂದು ಸಚಿವರು ತಿಳಿಸಿದರು.

ರಸ್ತೆ ಅಗಲೀಕರಣಕ್ಕೂ ಸ್ಮಾರ್ಟ್ ಸಿಟಿಗೂ ಏನೂ ಸಂಬಂಧ ಎನ್ನುವ ಪ್ರಶ್ನೆಗೆ, ಇಲ್ಲಿ ಸಂಬಂಧ ‌ಇಲ್ಲದ ಇಲಾಖೆಯವರು ಮನೆ ಹಾಗೂ ಕಂಪನಿ ಒಡೆದು ಹಾಕಿದ್ದಾರೆ. ನಾನು ಕಳೆದ ಎರಡೂ ವರ್ಷದ ಹಿಂದೆಯೇ ಸ್ಮಾರ್ಟ್ ಸಿಟಿ, ಲೋಕೋಪಯೋಗಿ, ಬುಡಾಗೆ ಪತ್ರ ಬರೆದು ಪ್ರಶ್ನಿಸಿದ್ದೆ. ಆಗ ಅವರು ನಾವು ಒಡೆದಿಲ್ಲ ಎನ್ನುತ್ತಾರೆ. ಹಾಗಿದ್ದರೆ ಆ ರಸ್ತೆಯನ್ನು ಯಾವ ಬಾಹುಬಲಿ ನಿಂತು ಒಡೆಸಿದ್ದಾರೆ ಎನ್ನುವುದು ಯಕ್ಷ ಪ್ರಶ್ನೆ ಎಂದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಆಸೀಫ್ ಸೇಠ್, ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಸುನೀಲ ಹನುಮಣ್ಣವರ್​ ಸೇರಿ ಇನ್ನಿತರರು ಇದ್ದರು.

ಇದನ್ನೂ ಓದಿ: 'ನಮ್ಮನ್ನು ಜಗ್ಗಬಾರದೆಂದು ಅವರನ್ನೇ ಜಗ್ಗಿದ್ದೇವೆ': ಆಪರೇಷನ್​ ಹಸ್ತ ಒಪ್ಪಿಕೊಂಡ ಸತೀಶ್​ ಜಾರಕಿಹೊಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.