ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಅಂಗನವಾಡಿ ಶಾಲೆಗಳಲ್ಲಿ ವಿದ್ಯುತ್ ಸಂಪರ್ಕ, ಗಾಳಿ-ಬೆಳಕು ಇಲ್ಲದೆ ಚಿಕ್ಕ ಚಿಕ್ಕ ಮಕ್ಕಳಲ್ಲಿ ಭಯ ಸೃಷ್ಟಿಯಾಗಿದೆ. ಇದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಜಿಲ್ಲೆಯ ಶಾಲೆಗಳ ಸ್ಥಿತಿಯಾಗಿದೆ.
ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಮತ್ತು ಮಹಿಳೆಯರ ಸಬಲೀಕರಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಮುಖ ಉದ್ದೇಶವಾಗಿದೆ. ಆದರೆ ಅಥಣಿಯಲ್ಲಿ ಮಕ್ಕಳನ್ನು ಕತ್ತಲೆ ಕೋಣೆಯಲ್ಲಿ ಕೂರಿಸುತ್ತಾರೆ. ಅಥಣಿ ತಾಲೂಕಿನಲ್ಲಿ 556 ಅಂಗನವಾಡಿ ಶಾಲೆಗಳಿವೆ. ಕೆಲವು ಅಂಗನವಾಡಿಗಳಿಗೆ ವಿದ್ಯುತ್ ಸಂಪರ್ಕ ಇಲ್ಲದೆ ಕತ್ತಲಿನಲ್ಲಿ ಮಕ್ಕಳು ಆಟ-ಪಾಠ ಕಲಿಯುವಂತಾಗಿದೆ.
ವಿದ್ಯುತ್ ಸಂಪರ್ಕ ಇಲ್ಲದೆ ಬೇಸಿಗೆ ಕಾಲದಲ್ಲಿ ಮಕ್ಕಳು ಬಳಲುವಂತಾಗಿದೆ. ನಮಗೆ ಏನೂ ಗೊತ್ತಿಲ್ಲ, ಯಾರಿಗೂ ಏನೂ ಮಾಹಿತಿ ನಿಡಬೇಡಿ ಎಂದು ನಮ್ಮ ಮೇಲಾಧಿಕಾರಿಗಳು ಆದೇಶ ಮಾಡಿದ್ದಾರೆ ಎಂದು ಅಂಗನವಾಡಿಯ ಶಿಕ್ಷಕಿಯೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಒಟ್ಟಾರೆಯಾಗಿ ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಆದಷ್ಟು ಬೇಗನೆ ಅಂಗನವಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿ ಎಂಬುದು ಸಾರ್ವಜನಿಕರ ಆಶಯವಾಗಿದೆ.