ಬೆಳಗಾವಿ: ಹಿಜಾಬ್ ಧರಿಸಲು ಅನುಮತಿ ಕೋರಿ ಮುಸ್ಲಿಂ ಸಂಘಟನೆಗಳು ನೀಡಿದ್ದ ಕರ್ನಾಟಕ ಬಂದ್ಗೆ ಬೆಳಗಾವಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸ್ವಯಂಪ್ರೇರಿತವಾಗಿ ಅಂಗಡಿ ಬಂದ್ ಮಾಡಿದ ಮುಸ್ಲಿಂ ಸಮುದಾಯದವರು ಬಂದ್ಗೆ ನೈತಿಕ ಬೆಂಬಲ ಸೂಚಿಸಿದರು. ಬೆಳಗಾವಿಯ ಪ್ರಮುಖ ಮಾರುಕಟ್ಟೆಗಳಲ್ಲಿ ಅಂಗಡಿ- ಮುಂಗಟ್ಟುಗಳನ್ನು ಮುಸ್ಲಿಂ ಸಮುದಾಯದವರು ಬಂದ್ ಮಾಡಿದ್ದಾರೆ. ಆದರೆ ಜಿಲ್ಲೆಯಲ್ಲಿ ಎಂದಿನಂತೆ ಸಹಜ ಜನಜೀವನ ಮುಂದುವರೆದಿದೆ.
ಮುಸ್ಲಿಂ ವ್ಯಾಪಾರಿಗಳು ಹೆಚ್ಚಿರುವ ಖಂಜರ್ಗಲ್ಲಿ, ಗಾಂಧಿನಗರ, ಉಜ್ವಲ್ ನಗರ, ಮಾಳಿ ಗಲ್ಲಿ, ಪೋರ್ಟ್ ರಸ್ತೆ, ಅಜಂ ನಗರ, ಆಜಾದ್ ನಗರಗಳಲ್ಲಿ ಅಂಗಡಿಗಳು ಬಂದ್ ಆಗಿದೆ. ಉಳಿದ ಸಮುದಾಯದವರ ಅಂಗಡಿ ಮುಂಗಟ್ಟುಗಳು ಕಾರ್ಯ ನಿರ್ವಹಿಸುತ್ತಿವೆ. ಬೆಳಗಾವಿಯಲ್ಲಿ ಅನಿರ್ದಿಷ್ಟಾವಧಿ ನಿಷೇಧಾಜ್ಞೆ ಜಾರಿ ಹಿನ್ನೆಲೆಯಲ್ಲಿ ಪ್ರತಿಭಟನಾ ಮೆರವಣಿಗೆ, ಪ್ರತಿಭಟನೆಗೆ ಅವಕಾಶ ನಿರಾಕರಿಸಲಾಗಿದೆ.
ಇದನ್ನೂ ಓದಿ: ನೂತನ ವಿಶ್ವಸುಂದರಿಯಾಗಿ ಹೊರಹೊಮ್ಮಿದ ಪೋಲೆಂಡ್ನ ಕರೋಲಿನಾ ಬಿಲಾವ್ಸ್ಕಾ