ETV Bharat / state

ರಾಜ್ಯದಲ್ಲಿ ಮತ್ತೊಮ್ಮೆ ಲಾಕ್​​​ಡೌನ್ ಇಲ್ಲ: ಸಚಿವ ಶ್ರೀಮಂತ ಪಾಟೀಲ್​ ಹೇಳಿಕೆ - ಸಚಿವ ಶ್ರೀಮಂತ ಪಾಟೀಲ

ನೆರೆ ರಾಜ್ಯವಾದ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಮಹಾಮಾರಿ ಕೊರನಾ ಮತ್ತೆ ಉಲ್ಬಣಿಸಿದ್ದು, ರಾಜ್ಯದ ಜನರು ಹೆಚ್ಚಿನ ಕಾಳಜಿ ವಹಿಸುವ ಅವಶ್ಯಕತೆ ಇದೆ ಎಂದು ಸಚಿವ ಶ್ರೀಮಂತ ಪಾಟೀಲ ಹೇಳಿಕೆ ನೀಡಿದ್ದಾರೆ. ಅದಲ್ಲದೇ, ಈ ಕಾರಣದಿಂದಾಗಿ ರಾಜ್ಯದಲ್ಲಿ ಲಾಕ್​ಡೌನ್​ ಪರಿಸ್ಥಿತಿ ಉದ್ಬವಿಸುವುದಿಲ್ಲ ಎಂಬ ಸ್ಪಷ್ಟನೆಯನ್ನೂ ಸಹ ನೀಡಿದ್ದಾರೆ.

Minister Shreemantha Patil
ಸಚಿವ ಶ್ರೀಮಂತ ಪಾಟೀಲ ಹೇಳಿಕೆ
author img

By

Published : Feb 20, 2021, 1:43 PM IST

ಬೆಳಗಾವಿ: ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಹೊಸ ಪ್ರಭೇದ ಕಾಣಿಸಿಕೊಂಡಿದ್ದು, ರಾಜ್ಯ ಸರ್ಕಾರ ಕೂಡ ಅಗತ್ಯ ಕ್ರಮಕ್ಕೆ ಸೂಚಿಸಿದೆ. ಆದರೆ, ಯಾವುದೇ ಕಾರಣಕ್ಕೂ ಸಹ ಮತ್ತೊಮ್ಮೆ ಲಾಕ್​​ಡೌನ್​ ಘೋಷಿಸುವುದಿಲ್ಲ ಎಂದು ಸಚಿವ ಶ್ರೀಮಂತ ಪಾಟೀಲ್ ಹೇಳಿದ್ದಾರೆ.

ಸಚಿವ ಶ್ರೀಮಂತ ಪಾಟೀಲ ಹೇಳಿಕೆ

ಬೆಳಗಾವಿಯ ಸಾಂಬ್ರಾ ‌ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಕಾಣಿಸಿಕೊಳ್ಳತೊಡಗಿದ್ದು, ಅಲ್ಲಿನ ಮೂರ್ನಾಲ್ಕು ಸಚಿವರಲ್ಲಿ ಈಗಾಗಲೇ ಈ ಸೋಂಕು ಕಾಣಿಸಿಕೊಂಡಿದೆ. ಆದ್ದರಿಂದ ಗಡಿ ಭಾಗದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಈಗಾಗಲೇ ಸರ್ಕಾರ ಸೂಚಿಸಿದ್ದು, ಅಧಿಕಾರಿಗಳ ಜತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ನೆರೆ ರಾಜ್ಯಗಳಲ್ಲಿ ಕೊರೊನಾ ಅಲೆ ಇರುವ ಕಾರಣಕ್ಕೆ ರಾಜ್ಯದಲ್ಲಿ ಲಾಕ್​​ಡೌನ್ ಪರಿಸ್ಥಿತಿ ಉದ್ಬವಿಸುವುದಿಲ್ಲ. ಆದರೆ, ಜನರು ಹೆಚ್ಚಿನ ಕಾಳಜಿ ವಹಿಸುವ ಅವಶ್ಯಕತೆ ಇದೆ ಎಂದರು.

ಇನ್ನು ಮಹಾರಾಷ್ಟ್ರದಲ್ಲಿ ಕನ್ನಡಿಗರ ಸರ್ವೇ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮಹಾರಾಷ್ಟ್ರ ಕನ್ನಡಿಗರಿಗೆ ಅನ್ಯಾಯವಾಗದಂತೆ ಕಾರ್ಯ ನಿರ್ವಹಿಸಲಾಗುವುದು ಎಂದು ಭರವಸೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.