ಬೆಳಗಾವಿ/ಚಿಕ್ಕೋಡಿ:ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ನಿಪ್ಪಾಣಿ ತಾಲೂಕಿನ ಕೊಗನೊಳಿ ಚೆಕ್ಪೋಸ್ಟ್ ಬಳಿ ಆರೋಗ್ಯ ಅಧಿಕಾರಿ ಹಾಗೂ ಆಶಾ ಕಾರ್ಯಕರ್ತೆಯರು ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ ಕರ್ನಾಟಕಕ್ಕೆ ಪ್ರವೇಶ ನೀಡುತ್ತಿದ್ದಾರೆ.
ಈ ಹಿಂದೆ ನೆರೆಯ ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿದ್ದರೂ ಯಾವುದೇ ಮುಂಜಾಗ್ರತ ಕ್ರಮ ಕೈಗೊಂಡಿರಲಿಲ್ಲ. ಈ ಹಿನ್ನೆಲೆ ಈಟಿವಿ ಭಾರತ ಎಚ್ಚೆತ್ತುಕೊಳ್ಳದ ಜಿಲ್ಲಾಡಳಿತ, ಕುಂದಾನಗರಿಗೆ ಮಹಾ ವೈರಸ್ ಭೀತಿ ಎಂಬ ಶೀರ್ಷಿಕೆಯಡಿ ಸುದ್ದಿ ಬಿತ್ತರಿಸಿತ್ತು.
ಓದಿ:ಎಚ್ಚೆತ್ತುಕೊಳ್ಳದ ಜಿಲ್ಲಾಡಳಿತ, ಕುಂದಾನಗರಿಗೆ 'ಮಹಾ' ವೈರಸ್ ಭೀತಿ!
ಇದರಿಂದ ಎಚ್ಚೆತ್ತುಕೊಂಡು ಜಿಲ್ಲಾಡಳಿತ ಈಗ ಆರೋಗ್ಯ ಸಿಬ್ಬಂದಿ ನೇಮಿಸಿ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸುತ್ತಿದ್ದಾರೆ.