ಚಿಕ್ಕೋಡಿ: ಕರ್ನಾಟಕದ ಗಡಿಯಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದರೂ ಸಾರ್ವಜನಿಕರು ಓಡಾಡುತ್ತಿರುವುರಿಂದ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಅಧಿಕಾರಿಗಳು ಥರ್ಮಲ್ ಸ್ಕ್ರೀನಿಂಗ್ ನಡೆಸುತ್ತಿದ್ದಾರೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಿಂದ 2 ಕಿ.ಮೀ ದೂರದಲ್ಲಿ ಮಹಾರಾಷ್ಟ್ರ, ಗೋವಾ ರಾಜ್ಯಕ್ಕೆ ಹೋಗುವ ಹೆದ್ದಾರಿಯಲ್ಲಿ ಬ್ಯಾರಿಕೇಡ್ ನಿರ್ಮಿಸಿ ಈ ಮಾರ್ಗದಲ್ಲಿ ರಾಜ್ಯದ ಒಳಗೆ ಹಾಗೂ ಹೊರಗೆ ಸಂಚರಿಸುವ ಖಾಸಗಿ ವಾಹನಗಲ್ಲಿನ ಪ್ರಯಾಣಿಕರನ್ನು ವೈದ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ತಪಾಸಣೆ ನಡೆಸುತ್ತಿದ್ದಾರೆ.
ನೆರೆ ರಾಜ್ಯ ಹಾಗೂ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ವೈರಸ್ ಪತ್ತೆಯಾದ ಕಾರಣ ವಾಹನ ಪ್ರವೇಶ ನಿರ್ಬಂಧ ಹೇರಿದರೂ ಸಹಿತ ಜನ ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಅಧಿಕಾರಿಗಳು ಥರ್ಮಲ್ ಸ್ಕ್ರೀನಿಂಗ್ನಿಂದ ತಪಾಸಣೆ ಮಾಡುತ್ತಿದ್ದಾರೆ.