ಬೆಳಗಾವಿ: ''ಲಿಂಗಾಯತ ಸಿಎಂ ಕುರಿತು ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯನ್ನು ತಿರುಚಿ ಹೇಳಲಾಗುತ್ತಿದೆ. ಬಿಜೆಪಿಯವರು ಭಾವನೆಗಳನ್ನು ಕೆರಳಿಸುವ ಯತ್ನ ಮಾಡುತ್ತಿದ್ದಾರೆ'' ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ನಿಂತಿದ್ದಾರೆ.
ಇದನ್ನೂ ಓದಿ: ವೀರಶೈವ ಮತಗಳು ಕೈಬಿಡುತ್ತವೆ ಎಂಬ ಆತಂಕ ಇಲ್ಲ : ಸಿಎಂ ಬೊಮ್ಮಾಯಿ
ಗೋಕಾಕ್ನಲ್ಲಿ ಇಂದು ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದರು. ಬಿಜೆಪಿ ಸರ್ಕಾರದಲ್ಲಿ 40 ಪರ್ಸೆಂಟ್ ಕಮೀಷನ್ ಆರೋಪ ವಿಚಾರಕ್ಕೆ ನಿಜಕ್ಕೂ ಬಿಜೆಪಿಯಲ್ಲಿ ಭ್ರಷ್ಟಾಚಾರ ನಡಿದೆಯಾ ಎಂದು ಪ್ರಶ್ನೆಗೆ ಪ್ರತಿಕ್ರಿಯಿಸಿದ ಸವದಿ, ''ಇಲ್ಲ ಅಂತ ಯಾರು ಹೇಳ್ತಾರೆ. ಭ್ರಷ್ಟಾಚಾರದ ಕುರಿತು ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಮೋದಿ ಅವರಿಗೆ ಪತ್ರ ಬರೆದಿದ್ದಾರೆ'' ಎಂದು ಹೇಳಿದರು.
ಇದನ್ನೂ ಓದಿ: ಅಗತ್ಯ ಸೇವೆಯಡಿ ಬರುವ ಗೈರು ಹಾಜರಿ ಮತದಾರರಿಗೆ ಪೋಸ್ಟಲ್ ವೋಟಿಂಗ್ ಸೆಂಟರ್
ಶೆಟ್ಟರ್ ಹಾಗೂ ಸವದಿ ಪಕ್ಷ ಬಿಟ್ಟಿದ್ದು ಸಮುದ್ರದಲ್ಲಿನ ಒಂದು ಲೋಟ ನೀರು ತೆಗೆದಂತೆ ಎಂಬ ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯಿಸಿದ ಸವದಿ, ''ಅವರಿಗೆ ನಾವು ಒಂದು ಲೋಟ ನೀರೇ, ಚುನಾವಣೆ ಆದ ಬಳಿಕ ಎಲ್ಲವೂ ಗೊತ್ತಾಗುತ್ತೆ. ನಾವು ತಂಬಿಗೆ ನೀರೋ ಅಥವಾ ಬಕೆಟ್ ನೀರೋ, ಯಾವ ನೀರು ಅನ್ನೋದು ತಿಳಿಯುತ್ತದೆ. ಗೋಕಾಕ್ ಚುನಾವಣೆಯಲ್ಲಿ ಈ ಬಾರಿ ಮೌನ ಕ್ರಾಂತಿ ಆಗುತ್ತೆ. ಮೌನ ಕ್ರಾಂತಿಯ ಮೂಲಕ ಹೊಸ ಕ್ರಾಂತಿಗೆ ನಾಂದಿಯಾಗಿತ್ತದೆ ಎಂದು ಲಕ್ಷ್ಮಣ ಸವದಿ ತಿರುಗೇಟು ನೀಡಿದರು.
ಇದನ್ನೂ ಓದಿ: ಕಲ್ಯಾಣ ಕರ್ನಾಟಕದಲ್ಲಿ ಪ್ರಾಬಲ್ಯಕ್ಕಾಗಿ ರಾಜಕೀಯ ಪಕ್ಷಗಳ ಪೈಪೋಟಿ: ಈ ಬಾರಿ ಕೈ ಮುನ್ನಡೆಗೆ ತಡೆಯೊಡ್ಡುತ್ತಾ ಕಮಲ ಪಡೆ?
ಸವದಿ ಕೊಡುವ ದುಡ್ಡು ಬಿಜೆಪಿಯದ್ದು, ಅದನ್ನು ಪಡೆದು ನಮಗೆ ವೋಟ್ ನೀಡಿ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ''ಗೋಕಾಕದಲ್ಲಿ ಅವರೇನು ಮಾಡಿದ್ದಾರೆ. ಅದನ್ನೇ ನಾನು ಹೇಳಲು ಬಂದಿದ್ದೇನೆ'' ಎಂದು ಲಕ್ಷ್ಮಣ ಸವದಿ ತಿಳಿಸಿದರು.
ಇದನ್ನೂ ಓದಿ: ಮಂಡ್ಯದಲ್ಲಿ ಜೆಡಿಎಸ್ ಬಂಡಾಯ: ಸಂಧಾನಕ್ಕೆ ಮುಂದಾದ ಹೆಚ್ಡಿಡಿ ಪುತ್ರ ರಮೇಶ್
ಇಬ್ಬರು ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್: ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಅಚ್ಚರಿ ಬೆಳವಣಿಗೆಯಾಗಿದೆ. ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿದೆ. ಇಬ್ಬರು ಅಭ್ಯರ್ಥಿಗಳು ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ. ಕಾಂಗ್ರೆಸ್ ಬಲಪಡಿಸಲು ಜೆಡಿಎಸ್, ಪಕ್ಷೇತರ ಅಭ್ಯರ್ಥಿಗಳಿಂದ ಪಕ್ಷಾಂತರ ಪರ್ವ ಆರಂಭವಾಗಿದೆ. ಜೆಡಿಎಸ್ ಅಭ್ಯರ್ಥಿ ಚಂದನ್ ಗಿಡ್ಡಣ್ಣವರ, ಪಕ್ಷೇತರ ಅಭ್ಯರ್ಥಿ ಪ್ರಕಾಶ ಪಾಗೋಜಿ ಕಾಂಗ್ರೆಸ್‌ಗೆ ಬೆಂಬಲಿಸಿದ್ದಾರೆ. ರಮೇಶ್ ಜಾರಕಿಹೊಳಿ ಕಟ್ಟಿಹಾಕಲು ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ.
ಇದನ್ನೂ ಓದಿ: ನಾಳೆಯಿಂದ ಎರಡು ದಿನ ವಿಶೇಷ ಮಹಾ ಪ್ರಚಾರ ಅಭಿಯಾನ - ಮತದಾರರ ಮನೆಗೆ ಬಿಜೆಪಿ ನಾಯಕರ ಭೇಟಿ: ಕಟೀಲ್
ಇದನ್ನೂ ಓದಿ: ಈ ಬಾರಿ ಸಿದ್ದರಾಮಯ್ಯ ಗೆಲ್ಲುವುದು ಕಷ್ಟವಿದೆ: ಬಿ.ಎಸ್.ಯಡಿಯೂರಪ್ಪ