ETV Bharat / state

ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿವಿ ವಿಧೇಯಕ ಸೇರಿ ಮೂರು ವಿಧೇಯಕಗಳ ಮಂಡನೆ - ವಿಧಾನಸಭೆಯಲ್ಲಿ ಮೂರು ವಿಧೇಯಕಗಳ ಮಂಡನೆ

ವಿಧಾನಸಭೆಯಲ್ಲಿ ವಿಶ್ವೇಶ್ವರ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ರಚನೆ, ಶಿವಮೊಗ್ಗದಲ್ಲಿ ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾಲಯ ಸ್ಥಾಪನೆ ಹಾಗೂ 2021ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಎರಡನೇ ತಿದ್ದುಪಡಿ ವಿಧೇಯಕಗಳನ್ನು ಮಂಡಿಸಲಾಯಿತು.

Three bills tabled in assembly
ವಿಧಾನಸಭೆಯಲ್ಲಿ ಮೂರು ವಿಧೇಯಕಗಳ ಮಂಡನೆ
author img

By

Published : Dec 16, 2021, 10:03 PM IST

ಬೆಳಗಾವಿ: ವಿಶ್ವೇಶ್ವರ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ರಚನೆ, ಶಿವಮೊಗ್ಗದಲ್ಲಿ ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾಲಯ ಸ್ಥಾಪನೆ ಹಾಗೂ 2021ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಎರಡನೇ ತಿದ್ದುಪಡಿ ವಿಧೇಯಕ ಸೇರಿ ಒಟ್ಟು ಮೂರು ವಿಧೇಯಕಗಳನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಶಿವಮೊಗ್ಗದಲ್ಲಿ ಆಯುಷ್ ವಿಶ್ವವಿದ್ಯಾಲಯ ಸ್ಥಾಪಿಸುವ ಸಂಬಂಧ ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾಲಯ ವಿಧೇಯಕ-2021 ಅನ್ನು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಮಂಡನೆ ಮಾಡಿದರು.

ಆಯುಷ್ ಪದ್ಧತಿಯಲ್ಲಿ ಶ್ರೇಷ್ಠತೆಯ ವಿಶ್ವವಿದ್ಯಾಲಯವನ್ನಾಗಿ ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾಲಯ ಹೆಸರಿನ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು. ಇದರಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಎಲ್ಲ ರೀತಿಯ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಈ ಮೂಲಕ ವೈದ್ಯಕೀಯ ಸಸ್ಯ ಸಂಪನ್ಮೂಲದ ಅಭಿವೃದ್ಧಿ, ಸಂಶೋದನೆ ಹಾಗೂ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಸ್ತಾಪದಲ್ಲಿ ಸಚಿವರು ತಿಳಿಸಿದರು.

ಯುವಿಸಿಇ ವಿಶ್ವವಿದ್ಯಾಲಯ ವಿಧೇಯಕ :

ಬೆಂಗಳೂರಿನ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜನ್ನು (ಯುವಿಸಿಇ) ಐಐಟಿ ಮಾದರಿಯ ಸ್ವಾಯತ್ತ ಸಂಸ್ಥೆಯಾಗಿ ಪರಿವರ್ತಿಸಿ ಪ್ರತ್ಯೇಕ ವಿಶ್ವವಿದ್ಯಾಲಯವಾಗಿ ರೂಪಿಸುವ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ವಿಧೇಯಕ-2021 ಅನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಂಡಿಸಿದರು.

ವಿಧೇಯಕದ ಪ್ರಸ್ತಾವನೆಯಲ್ಲಿ 1964 ರಿಂದ ಬೆಂಗಳೂರು ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜಾಗಿ ಯುವಿಸಿಇ ಕಾಲೇಜು ಆರಂಭವಾಗಿತ್ತು. ಈ ಕಾಲೇಜಿಗೆ ರಾಷ್ಟ್ರೀಯ ಮಾನ್ಯತೆ ತರಲು ಸೂಕ್ತ ಶಿಫಾರಸುಗಳನ್ನು ನೀಡಲು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಉಪಾಧ್ಯಕ್ಷರಾದ ಎಸ್.ವಿ.ರಂಗನಾಥ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು.

ಸಮಿತಿಯೂ ಐಐಟಿ ಮಾದರಿಯ ಸ್ವಾಯತ್ತ ಸಂಸ್ಥೆಯನ್ನಾಗಿ ಮಾಡಿ ಉತ್ಕೃಷ್ಠ ಗುಣಮಟ್ಟದ ಸಂಸ್ಥೆಯಾಗಿ ರೂಪಿಸಲು ಕಾಲೇಜು ಬದಲು ವಿಶ್ವವಿದ್ಯಾಲಯವಾಗಿ ಬದಲಿಸಲು ಪ್ರಸ್ತಾಪಿಸಲಾಗಿದೆ.

ಇದನ್ನೂ ಓದಿ: Omicron: ಕರ್ನಾಟಕದಲ್ಲಿ ಮತ್ತೆ 5 ಒಮಿಕ್ರಾನ್ ಪತ್ತೆ, ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.