ETV Bharat / state

ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾಗೆ ಮೂವರು ಬಲಿ..!

author img

By

Published : Jul 13, 2020, 12:28 AM IST

ಬೆಳಗಾವಿ ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 470 ಕ್ಕೆ ಏರಿಕೆಯಾಗಿದೆ.

Three deaths to Corona in Belgaum district
ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾಗೆ ಮೂವರು ಬಲಿ

ಬೆಳಗಾವಿ: ಜಿಲ್ಲೆಯಲ್ಲಿ ಇಂದು ಮೂವರು ಕೊರೊನಾಗೆ ಬಲಿ ಆಗಿದ್ದು, ಇಬ್ಬರಿಗೆ ಹೊಸದಾಗಿ ಕೊರೊನಾ ಸೋಂಕು ತಗುಲಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮರಣ ಹೊಂದಿರುವ ಮೂವರಲ್ಲಿ ಅಥಣಿಯ (62) ವರ್ಷದ ವೃದ್ಧ, ಬೆಳಗಾವಿ ಶಿವಬಸವನಗರದ (80) ವೃದ್ಧೆ ಹಾಗೂ ವಿಜಯನಗರ (57) ವ್ಯಕ್ತಿ ಸಾವನ್ನಪ್ಪಿದ್ದಾರೆ. ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ.

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದ್ದರೂ ಕೊರೊನಾ ವೈರಸ್ ತಗುಲಿ ದಿನದಿಂದ ದಿನಕ್ಕೆ ಸಾವಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಬೆಳಗಾವಿ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 470 ಕ್ಕೆ ಏರಿಕೆಯಾಗಿದ್ದು, ಈವರೆಗೂ 362 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 96 ಕೊರೊನಾ ಪಾಸಿಟಿವ್ ಕೇಸ್‌ಗಳು ಸಕ್ರಿಯವಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಲಾದ ಹೆಲ್ಥ್ ಬುಲೆಟಿನ್​​ನಲ್ಲಿ ತಿಳಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.