ಬೆಳಗಾವಿ: ಜಿಲ್ಲೆಯಲ್ಲಿ ಇಂದು ಪತ್ತೆ ಮೂರು ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದ ಮೂವರಿಗೆ ಸೋಂಕು ದೃಢಪಟ್ಟಿದೆ. ಈ ಮೂವರು ರೋಗಿ ಸಂಖ್ಯೆ 149 ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದರು. ಮೂವರಿಗೂ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
149 ನೇ ಸೋಂಕಿತ ವ್ಯಕ್ತಿ ದೆಹಲಿಯ ನಿಜಾಮುದ್ದೀನ್ ತಬ್ಲಿಘಿ ಮರ್ಕಜ್ ಮಸೀದಿಯಲ್ಲಿ ನಡೆದ ಧರ್ಮಸಭೆಯಲ್ಲಿ ಪಾಲ್ಗೊಂಡಿದ್ದರು. ಈತನ ಸಂಪರ್ಕ ಹೊಂದಿದ್ದ ಕುಡಚಿ ಪಟ್ಟಣದ 14 ವರ್ಷದ ಬಾಲಕ, 45 ವರ್ಷದ ವ್ಯಕ್ತಿ ಹಾಗೂ 39 ವರ್ಷದ ಪುರುಷನಿಗೆ ಸೋಂಕು ತಗುಲಿದೆ.