ಚಿಕ್ಕೋಡಿ :ಗಡಿ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಕಾಗವಾಡ ತಾಲೂಕಿನ ನದಿ ತೀರದ ಪ್ರವಾಹ ಪೀಡಿತ ಗ್ರಾಮಗಳಿಗೆ, ಶಿರಗುಪ್ಪಿ ಗ್ರಾಮದಲ್ಲಿ ಮೂರು ಕಡೆ ಗಂಜಿ ಕೇಂದ್ರ ಪ್ರಾರಂಭಿಸಲಾಗಿದೆ.
ಹಲವು ಗ್ರಾಮಗಳ ರಸ್ತೆ ಸಂಪರ್ಕ ಈಗಾಗಲೇ ಸಂಪೂರ್ಣವಾಗಿ ಬಂದ್ ಆಗಿದ್ದು, ಸಂಬಂಧಿಕರ ಮನೆಗೆ ಹೋಗಲು ಸಾಧ್ಯವಾಗುತ್ತಿಲ್ಲ. ಅನಿವಾರ್ಯವಾಗಿ ಗಂಜಿ ಕೇಂದ್ರದಲ್ಲಿ ವಾಸಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಇನ್ನೂ ಶಿರಗುಪ್ಪಿ ಗ್ರಾಮ ಪಂಚಾಯಿತಿಯಿಂದ ಸೂಕ್ತ ವ್ಯವಸ್ಥೆ ಸಹ ಕಲ್ಪಿಸಲಾಗುತ್ತಿದೆ.
ಕಾಗವಾಡ ತಾಲೂಕಿನಲ್ಲಿ ಕೃಷ್ಣಾ ಕಿತ್ತೂರ, ಕಾತ್ರಾಳ, ಉಗಾರ ಕೆ.ಎಚ್, ಉಗಾರ ಬಿ.ಕೆ. ಶಿರಗುಪ್ಪಿ, ಕಾಗವಾಡಗಳಲ್ಲಿ , ಗಂಜಿ ಕೇಂದ್ರ ತೆರೆಯಲಾಗಿದೆ . ಆರು ಗ್ರಾಮಗಳ ಗ್ರಾಮಸ್ಥರನ್ನು ಸ್ಥಳಾಂತರಿಸಲಾಗಿದೆ. ಇನ್ನು ಹಲವರು ನಡುಗಡ್ಡೆಯಲ್ಲಿ ಸಿಲುಕಿದ್ದಾರೆ. ದನ, ಕರುಗಳಿಗೆ ಮೇವು ವಿತರಣೆ ಮಾಡಲಾಗುತ್ತಿದೆ ಎಂದು ಕಾಗವಾಡ ತಹಶೀಲ್ದಾರ್ ಪರಿಮಳಾ ದೇಶಪಾಂಡೆ ಮಾಹಿತಿ ನೀಡಿದರು.