ಅಥಣಿ/ಬೆಳಗಾವಿ: ಉಪ ಚುನಾವಣೆ ಫಲಿತಾಂಶ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಮನೆಯಲ್ಲಿ ಸಾರ್ವಜನಿಕರಿಗೆ ಉಪಹಾರ ವ್ಯವಸ್ಥೆ ಮಾಡಿಸಿದ್ದಾರೆ.
ಅಥಣಿ ಜನತೆ ಕೂಡ ಚುನಾವಣಾ ಲೆಕ್ಕಾಚಾರದಲ್ಲಿ ನಿರತರಾಗಿದ್ದಾರೆ. ಇನ್ನು ಅಥಣಿ ಕ್ಷೇತ್ರದಲ್ಲಿ ಬಿಜೆಪಿಯ ಮಹೇಶ್ ಕುಮಟಳ್ಳಿ ಗೆಲ್ಲುವರೆಂಬ ನಿರೀಕ್ಷೆಯನ್ನು ಕುಟುಂಬದವರು ಹೊಂದಿದ್ದಾರೆ. ಈ ಹಿನ್ನೆಲೆ ಗೆಲ್ಲುವ ವಿಶ್ವಾಸದಿಂದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಮನೆಯ ಬಳಿ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಉಪಹಾರ ತಯಾರಿ ಮಾಡಿಸಲಾಗ್ತಿದೆ.