ಬೆಳಗಾವಿ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆವೋರ್ವಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಬೀಜಗರ್ಣಿ ಗ್ರಾಮದ ಬಳಿ ನಡೆದಿದೆ.
ಮಾಂಡೊಳ್ಳಿ ಗ್ರಾಮದ ಮಂದಾ ಭರತ ಪಾಟೀಲ್(40) ಮೃತ ಮಹಿಳೆ. ಇನ್ನೂ ಆಕೆ ಕುಳಿತಿದ್ದ ಬೈಕ್ ಸವಾರ ಭರತ ಪಾಟೀಲ್ ಎಂಬುವರು ಗಾಯಗೊಂಡಿದ್ದಾರೆ. ಪಕ್ಕದ ಬೀಜಗರ್ಣಿ ಗ್ರಾಮದಲ್ಲಿ ಜಾತ್ರೆ ಇರುವುದರಿಂದ ದಂಪತಿ ದ್ವಿಚಕ್ರ ವಾಹನದಲ್ಲಿ ತೆರಳಿದ್ದರು. ಜಾತ್ರೆ ಮುಗಿಸಿಕೊಂಡು ಮರಳಿ ಬರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಅಪಘಾತವಾದಾಗ ಹಿಂಬದಿ ಕುಳಿತಿದ್ದ ಮಂದಾ ಪಾಟೀಲ್ ಅವರಿಗೆ ಗಂಭೀರವಾಗಿ ಪೆಟ್ಟು ಬಿದ್ದಿದ್ದರಿಂದ ಸ್ಥಳೀಯರು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆಗ ಮಾರ್ಗ ಮಧ್ಯೆ ಆಕೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.