ETV Bharat / state

ಬೆಳಗಾವಿ ಜಿಲ್ಲೆಯಲ್ಲಿ ಎಸ್​​​ಎಸ್​​​​ಎಲ್​​ಸಿ ಪರೀಕ್ಷೆ ಬರೆಯುತ್ತಿರುವ 74,424 ವಿದ್ಯಾರ್ಥಿಗಳು - Belagavi SSSL students

ಬೆಳಗಾವಿ ಜಿಲ್ಲೆಯಲ್ಲಿ ಇಂದು ಒಟ್ಟು 74,424 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಿದ್ಧರಾಗಿದ್ದು ಪರೀಕ್ಷಾ ಕೆಂದ್ರಗಳಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

SSLC exam
ಬೆಳಗಾವಿ ಜಿಲ್ಲೆ
author img

By

Published : Jun 25, 2020, 10:24 AM IST

Updated : Jun 25, 2020, 11:39 AM IST

ಬೆಳಗಾವಿ: ಇಂದು ರಾಜ್ಯದಲ್ಲಿ 10ನೇ ತರಗತಿ ಪರೀಕ್ಷೆಗಳು ಆರಂಭವಾಗುತ್ತಿದ್ದು 74,424 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಎದುರಿಸಲಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಈಗಾಗಲೇ ಪರೀಕ್ಷಾ ಕೇಂದ್ರಗಳನ್ನು ತಲುಪಿದ್ದಾರೆ.

ಬೆಳಗಾವಿ ಎಸ್​ಎಸ್​​ಎಲ್​ಸಿ ವಿದ್ಯಾರ್ಥಿಗಳು

ಕೊರೊನಾ ವೈರಸ್ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿಬ್ಬಂದಿ ಸ್ಕ್ರೀನಿಂಗ್ ಮಾಡಿ, ಸ್ಯಾನಿಟೈಸರ್, ಮಾಸ್ಕ್ ನೀಡಿ ಪರೀಕ್ಷಾ ಕೇಂದ್ರದ ಒಳಗೆ ಕಳಿಸುತ್ತಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮಾರ್ಕಿಂಗ್ ವ್ಯವಸ್ಥೆ, ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಗೆ ಪ್ರತ್ಯೇಕ ಕೌಂಟರ್ ಸ್ಥಾಪನೆ ಮಾಡಲಾಗಿದೆ.

SSLC exam in Belagavi
ವಿದ್ಯಾರ್ಥಿಗಳಿಗೆ ಸ್ಕ್ರೀನಿಂಗ್ ಮಾಡುತ್ತಿರುವ ಸಿಬ್ಬಂದಿ

ಜಿಲ್ಲೆಯಲ್ಲಿ ಒಟ್ಟು 271 ಪರೀಕ್ಷಾ ಕೇಂದ್ರಗಳು, 4,029 ಪರೀಕ್ಷಾ ಕೊಠಡಿಗಳು, 247 ಮುಖ್ಯ ಅಧೀಕ್ಷಕರು, 69 ಉಪ ಮುಖ್ಯ ಅಧೀಕ್ಷಕರು, 5,256 ಕೊಠಡಿ ಮೇಲ್ವಿಚಾರಕರು, 94 ಮಾರ್ಗಾಧಿಕಾರಿಗಳು, 273 ಸ್ಥಾನಿಕ ಜಾಗೃತ ದಳ, 131 ಜಿಲ್ಲಾ ಮಟ್ಟದ ವೀಕ್ಷಕ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಒಟ್ಟಿನಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

Last Updated : Jun 25, 2020, 11:39 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.