ಚಿಕ್ಕೋಡಿ: ಕೃಷ್ಣಾ ನದಿ ನೀರು ಹೋರಾಟಕ್ಕೆ ವ್ಯಾಪಕ ಬೆಂಬಲ ದೊರೆತಿದ್ದು, ಕುಡಿಯುವ ನೀರಿನ ಸಮಸ್ಯೆಗೆ ಶಾಸ್ವತ ಪರಿಹಾರಕ್ಕೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗೆ 30ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿವೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಕುಡಿಯುವ ನೀರಿನ ಶಾಸ್ವತ ಪರಹಾರಕ್ಕೆ ಪ್ರತಿಭಟನೆ ಆಯೋಜಿಸಲಾಗಿದ್ದು, ಅಥಣಿ ಪಟ್ಟಣದಲ್ಲಿ ಬೆಳಗ್ಗೆಯಿಂದಲೇ ಬಸ್ ಸಂಚಾರ ಸ್ಥಗಿತಗೊಂಡ ಪರಿಣಾಮ ಬಸ್ನಲ್ಲಿ ಸಂಚಾರ ಮಾಡುತ್ತಿದ್ದ ರೋಗಿಗಳನ್ನು 108 ವಾಹನದಲ್ಲಿ ಕಳುಹಿಸಿಕೊಳಲಾಯಿತು. ಬೆಳಗ್ಗೆಯಿಂದಲೇ ಬಂದ್ ಕರೆ ನೀಡಿರುವುದರಿಂದ ಬಸ್ಗಳಿಲ್ಲದೆ ಪ್ರಯಾಣಿಕರು ಪರದಾಡುತ್ತಿದ್ದಾರೆ.
ಸಂಪೂರ್ಣವಾಗಿ ಅಥಣಿ ಬಂದ್ಗೆ ಕರೆ ನೀಡಲಾಗಿದ್ದು, ಸಾವಿರಾರು ರೈತರು ಪ್ರತಿಭಟನೆಯಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.