ETV Bharat / state

ಇಂದು ಬೆಳಗಾವಿಗೆ ಬಿಎಸ್‍ವೈ - ಅರುಣ್‍ ಸಿಂಗ್​​ ಆಗಮನ: ಸಂಪುಟ ಸರ್ಕಸ್​ಗೆ ಸಿಗುತ್ತಾ ತಾರ್ಕಿಕ ಅಂತ್ಯ?

ರಾಜ್ಯ ಬಿಜೆಪಿ ಉಸ್ತುವಾರಿ ಹೊಣೆ ಹೊತ್ತ ಬಳಿಕ ಅರುಣ್ ಸಿಂಗ್, ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಸಂಪುಟ ವಿಸ್ತರಣೆ, ಪುನಾರಚನೆ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಅರುಣ್ ಸಿಂಗ್ ಅವರ ರಾಜ್ಯ ಭೇಟಿ ಕುತೂಹಲ ಹೆಚ್ಚಿಸಿದೆ.

author img

By

Published : Dec 4, 2020, 2:52 AM IST

BS Yediyurappa and Arun singh will visit belagavi
ಬಿಎಸ್‍ವೈ - ಅರುಣ್‍ ಸಿಂಗ್

ಬೆಳಗಾವಿ: ಮುಖ್ಯಮಂತ್ರಿ ಬಿಎಸ್​​ವೈ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದಿನಿಂದ ಎರಡು ದಿನಗಳ ಕಾಲ ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ.

ಉಭಯ ನಾಯಕರು ಮಧ್ಯಾಹ್ನ 3.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಬಳಿಕ ಮಾಜಿ ಸಚಿವ ಉಮೇಶ ಕತ್ತಿ ಅವರ ಮಾಲೀಕತ್ವದ ಯುಕೆ 27 ಹೋಟೆಲ್‍ನಲ್ಲಿ ನಡೆಯಲಿರುವ ಬಿಜೆಪಿ ಕೋರ್​​ ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಡಿ. 5ರಂದು ಬೆಳಗಾವಿಯ ಗಾಂಧಿ ಭವನದಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಅರುಣ್‍ ಸಿಂಗ್, ಸಿಎಂ ಬಿ.ಎಸ್‍ವೈ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಹಾಗೂ ಸಿ.ಟಿ. ರವಿ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಲವು ಸಲ ದೆಹಲಿಗೆ ತೆರಳಿ ರಾಷ್ಟ್ರನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಆದರೂ ಸಂಪುಟ ಸರ್ಜರಿ ಸರ್ಕಸ್ ಮಾತ್ರ ಸುಖಾಂತ್ಯ ಕಾಣುತ್ತಿಲ್ಲ. ಮಂತ್ತೊದೆಡೆ ಸಿಎಂ ಯಡಿಯೂರಪ್ಪ ದೆಹಲಿ ಭೇಟಿ ವೇಳೆ ಒಮ್ಮೆಯೂ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‍ ಸಿಂಗ್ ಅವರನ್ನು ಭೇಟಿ ಮಾಡಿಲ್ಲ. ಇದೀಗ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‍ ಸಿಂಗ್ ಸಂಪುಟ ಸರ್ಜರಿ ಬಗ್ಗೆ ಹೈಕಮಾಂಡ್ ನೀಡುವ ಸಂದೇಶ ಹೊತ್ತು ದೆಹಲಿಯಿಂದ ಬೆಳಗಾವಿಗೆ ಬರಲಿದ್ದಾರೆ ಎನ್ನಲಾಗುತ್ತಿದೆ.

ಹೈಕಮಾಂಡ್ ನೀಡುವ ಸಂದೇಶದ ಬಗ್ಗೆ ಅರುಣ್‍ ಸಿಂಗ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜತೆಗೆ ಚರ್ಚಿಸಲಿದ್ದಾರೆ. ಅರುಣ್ ಸಿಂಗ್, ರಾಜ್ಯ ಭೇಟಿಯಿಂದ ಸಂಪುಟ ಸೇರಲು ಉತ್ಸುಕರಾಗಿರುವ ಮಿತ್ರಮಂಡಳಿ ಸದಸ್ಯರು ಸೇರಿ ಮೂಲ ಬಿಜೆಪಿಗರಾದ ಉಮೇಶ ಕತ್ತಿ, ಅರವಿಂದ ಲಿಂಬಾವಳಿ, ಸಿ.ಪಿ. ಯೋಗೇಶ್ವರ್​ ಅವರ ಸಂತಸಕ್ಕೆ ಕಾರಣವಾಗಿದೆ. ಅಲ್ಲದೇ ಸಂಪುಟ ಸರ್ಜರಿ ಸರ್ಕಸ್‍ಗೂ ತಾರ್ಕಿಕ ಅಂತ್ಯ ಸಿಗಬಹುದು ಎಂಬ ಲೆಕ್ಕಾಚಾರವನ್ನು ರಾಜ್ಯ ನಾಯಕರು ಹೊಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.