ಅಥಣಿ: ಉಪಚುನಾವಣೆ ಹಿನ್ನೆಲೆ ಇಂದು ತಾಲೂಕಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ತಮ್ಮ ಅಭ್ಯರ್ಥಿ ಪರ ಪ್ರಚಾರ ಕೈಗೊಳ್ಳಲಿದ್ದಾರೆ.
ಅಥಣಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಗಜಾನನ ಮಂಗಸೂಳಿ ಪರ ಸಿದ್ದರಾಮಯ್ಯ ಪ್ರಚಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಮೊದಲಿಗೆ ಅಥಣಿ ವಿಧಾನಸಭಾ ಕ್ಷೇತ್ರದ ತೇಲಸಂಗ ಗ್ರಾಮದಲ್ಲಿ 11 ಗಂಟೆಗೆ ಪ್ರಚಾರ ನಡೆಸಲಿದ್ದು, ನಂತರ ಕೋಕಟನೂರ್ಗೆ 1ಗಂಟೆಗೆ ಆಗಮಿಸಲಿದ್ದಾರೆ. ಬಳಿಕ ನಂದಗಾಂವ್ ಹಾಗೂ ಸತ್ತಿ ದರೂರನಲ್ಲಿ ಪ್ರಚಾರ ನಡೆಸಲಿದ್ದಾರೆ. ಇನ್ನು ಸಂಜೆ 6 ಗಂಟೆ ಸುಮಾರಿಗೆ ಅಥಣಿ ಪ್ರಮುಖ ರಸ್ತೆಗಳಲ್ಲಿ ಸಿದ್ದರಾಮಯ್ಯ ರೋಡ್ ಶೋ ನಡೆಸಲಿದ್ದಾರೆ.
ಸಾರಿ ಬಜಾರ್ನಲ್ಲಿ ಬೃಹತ್ ಸಭೆ ಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಥಣಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ವೇಳಾ ಪಟ್ಟಿಯಲ್ಲಿ ಪ್ರಕಟಿಸಲಾಗಿದೆ.