ಚಿಕ್ಕೋಡಿ: ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನಾಳೆ ನೀರು ಬಿಡುಗಡೆ ಮಾಡುತ್ತಿರುವ ಕಾರಣ, ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಅಧಿಕಾರಿಗಳು ಹೈ-ಅಲರ್ಟ್ ಘೋಷಿಸಿದ್ದಾರೆ.
ಗುರುವಾರ ಬೆಳಗ್ಗೆ 8 ಗಂಟೆಗೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕೋಯ್ನಾ ಜಲಾಶಯದಿಂದ 2,100 ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗುತ್ತಿದ್ದು, ಇದರಿಂದ ಚಿಕ್ಕೋಡಿ ಭಾಗದ ಕೆಳಹಂತದ ಹಳ್ಳಿಗಳಿಗೆ ಹೈ-ಅಲರ್ಟ್ ಆಗಿರುವಂತೆ ಚಿಕ್ಕೋಡಿ ತಹಶೀಲ್ದಾರ ಸಂತೋಷ ಬಿರಾದರ ಸೂಚಿಸಿದ್ದಾರೆ.
ಕೋಯ್ನಾ ಜಲಾಶಯ ಶೇ. 75% ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ನೀರು ಬಿಡಲಾಗುತ್ತಿದ್ದು ಈಗಾಗಲೇ ಚಿಕ್ಕೋಡಿ ತಾಲೂಕಿನ ಕೃಷ್ಣಾ ನದಿಗೆ ಸುಮಾರು 2 ಲಕ್ಷ ಕ್ಯೂಸೆಕ್ಸ್ ನೀರು ಮಹಾರಾಷ್ಟ್ರ ದಿಂದ ಹರಿದು ಬರುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.