ಚಿಕ್ಕೋಡಿ: ಟ್ರ್ಯಾಕ್ಟರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿ ಸಂಭವಿಸಿದೆ.
ಬೈಕ್ ಸವಾರ ಕುಮಾರ್ ತಗಣೆ (25) ಸ್ಥಳದಲ್ಲಿ ಸಾವನ್ನಪ್ಪಿದ್ದು, ಹಿಂಬದಿ ಸವಾರ ಅಪ್ಪಾಸಾಬ ಜಡಗೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಈತನನ್ನು ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಇಬ್ಬರು ಕಾಗವಾಡ ಪಟ್ಟಣದ ನಿವಾಸಿಗಳು ಎಂದು ತಿಳಿದು ಬಂದಿದೆ. ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.