ಚಿಕ್ಕೋಡಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಂಜಾನಟ್ಟಿ ಗ್ರಾಮದ ಬಳಿ ಕಬ್ಬು ತುಂಬಿದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿಯಲ್ಲಿ ಕುಳಿತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವನಪ್ಪಿದ್ದಾಳೆ.
ಹುಕ್ಕೇರಿ ತಾಲೂಕಿನ ಶಿರಹಟ್ಟಿ ಗ್ರಾಮದ ಬಾಳವ್ವ ಹರಗಪೂರೆ (37) ಮೃತ ಮಹಿಳೆ ಎಂದು ತಿಳಿದು ಬಂದಿದೆ.
ಬೈಕ್ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಂಜಾನಟ್ಟಿ ಗ್ರಾಮದ ಚಿಕ್ಕೋಡಿ-ಮೀರಜ ರಾಜ್ಯ ಹೆದ್ದಾರಿ ಮೇಲೆ ಈ ಘಟನೆ ಸಂಭವಿಸಿದ್ದು, ಈ ಕುರಿತು ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.