ಬೆಳಗಾವಿ: ಜಮೀನಿನಲ್ಲಿ ಉಳುಮೆ ಮಾಡುವ ವೇಳೆ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಅಂಬೇವಾಡಿಯಲ್ಲಿ ನಡೆದಿದೆ.
![tractor driver died](https://etvbharatimages.akamaized.net/etvbharat/prod-images/7772743_367_7772743_1593105282749.png)
ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಬೆಳಗಾವಿ ಗ್ರಾಮೀಣ ಎಸಿಪಿ ಶಿವಾರೆಡ್ಡಿ, ಕಾಕತಿ ಠಾಣೆಯ ಸಿಪಿಐ ಶ್ರೀಶೈಲ ಕೌಜಲಗಿ ಹಾಗೂ ಪಿಎಸ್ಐ ಅವಿನಾಶ ಯರಗೊಪ್ಪ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ.