ಅಥಣಿ: ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ವಕ್ಷೇತ್ರದಲ್ಲಿಯೇ ಟ್ರಾಫಿಕ್ ಸಮಸ್ಯೆಯಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ.
ಪಟ್ಟಣದಲ್ಲಿ ಬೇಕಾಬಿಟ್ಟಿ ವಾಹನ ಚಾಲನೆ, ಮುಖ್ಯರಸ್ತೆಗಳಲ್ಲಿ ಟ್ರ್ಯಾಕ್ಟರ್ ಹಾಗೂ ಲಾರಿಗಳು ಹಾದು ಹೋಗುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಗಂಭೀರವಾಗುತ್ತಿರುವ ಈ ಟ್ರಾಫಿಕ್ ಸಮಸ್ಯೆಗೆ ಪೊಲೀಸ್ ಇಲಾಖೆ ಕಡಿವಾಣ ಹಾಕಬೇಕಾಗಿದೆ. ಹೆಚ್ಚುತ್ತಿರುವ ಟ್ರಾಫಿಕ್ ಪರಿಣಾಮ ಜತ್ತ ಜಾಂಬೋಟಿ ರಸ್ತೆ ಹಾಗೂ ಅಂಬೇಡ್ಕರ್ ರಸ್ತೆಯಲ್ಲಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿವೆ.
ಪಟ್ಟಣದ ರಾಜ್ಯ ಹೆದ್ದಾರಿ, ಇತರ ಒಳ ರಸ್ತೆಗಳು ಸೇರಿದಂತೆ ಎಲ್ಲ ರಸ್ತೆಗಳಲ್ಲಿ ಬೇಕಾಬಿಟ್ಟಿಯಾಗಿ ಪಾರ್ಕಿಂಗ್ ಮಾಡಿ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ. ಹಾಗಾಗಿ ಅಥಣಿಗೆ ಒಂದು ಟ್ರಾಫಿಕ್ ಪೊಲೀಸ್ ಠಾಣೆ ನೀಡುವುದಲ್ಲದೆ, ಮುಖ್ಯ ವೃತ್ತಗಳಲ್ಲಿ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.