ಚಿಕ್ಕೋಡಿ : ಕಳೆದ ವರ್ಷ ಭಾರತೀಯ ವೀರ ಯೋದರನ್ನು ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಕಳೆದುಕೊಂಡ ದಿನವನ್ನು ಕರಾಳ ದಿನಾಚರಣೆಯನ್ನಾಗಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಧುಪದಾಳ ಗ್ರಾಮದಲ್ಲಿ ಆಚರಿಸಲಾಯಿತು.
ಕಳೆದ ವರ್ಷ ಜಮ್ಮು-ಕಾಶ್ಮೀರನಲ್ಲಿ ನಡೆದ ಘಟನೆಯಲ್ಲಿ ಸಿಆರ್ಎಫ್ಸಿ ವೀರ ಯೋಧರನ್ನು ಕರೆದೊಯುತ್ತಿದ್ದ ಸೇನಾ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ಹಿನ್ನೆಲೆ 40 ಭಾರತೀಯ ವೀರ ಯೋಧರು ಬಲಿಯಾಗಿದ್ದರು. ಈ ಹಿನ್ನೆಲೆ ಜಿಲ್ಲೆಯಾದ್ಯಂತ ಯೋಧರನ್ನು ಸ್ಮರಿಸಿ ಶ್ರದ್ಧಾಂಜಲಿ ಸಲ್ಲಿಸಲಾಗಿದೆ.
ಧುಪದಾಳ ಗ್ರಾಮದ ಯುವಕರು ಗಣಪತಿ ಸರ್ಕಲ್ನಲ್ಲಿ ಕ್ಯಾಂಡಲ್ ಹಿಡಿದು ಮಡಿದ ಸೈನಿಕರಿಗೆ ಮೌನಾಚರಣೆ ಮೂಲಕ ಶ್ರದ್ದಾಂಜಲಿ ಸಲ್ಲಿಸಿದರು.