ಬೆಳಗಾವಿ: ಕರ್ನಾಟಕದಿಂದ ಗೋವಾಕ್ಕೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ತಡರಾತ್ರಿ ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದಾರೆ. ಗೋವಾದ ಮಡಗಾಂವ್ನ ಹುಸೇನ್ ದೇಸಾಯಿ ಹಾಗೂ ಆಜಾದ್ ಕಾದ್ರೊಳ್ಳಿ ಎಂಬಿಬ್ಬರನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿಗಳು ಬೆಳಗಾವಿ ತಾಲೂಕಿನ ಹಾಲಗಿಮರಡಿ ಕ್ರಾಸ್ ಮೂಲಕ ಎರಡು ವಾಹನಗಳಲ್ಲಿ ಅಕ್ರಮವಾಗಿ ಗೋವಾಕ್ಕೆ ಗೋಮಾಂಸವನ್ನು ಸಾಗಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಹಿರೇಬಾಗೆವಾಡಿ ಪೊಲೀಸರು, ಗೋಮಾಂಸ ಸಮೇತ ಇಬ್ಬರು ಆರೋಪಿಗಳು ಮತ್ತು ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಹಿರೇಬಾಗೇವಾಡಿ ಠಾಣೆ ಸಿಪಿಐ ವಿಜಯಕುಮಾರ್ ಸಿನ್ನೂರ್ ಮಾರ್ಗದರ್ಶನದಲ್ಲಿ ಪಿಎಸ್‍ಐ ಶಶಿಕುಮಾರ್ ಕೊರಲೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಇತರ ಪೊಲೀಸ್ ಸಿಬ್ಬಂದಿ ಭಾಗಿಯಾಗಿದ್ದರು. ಈ ಕುರಿತು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಮತ್ತೊಂದು ಆ್ಯಸಿಡ್ ದಾಳಿ.. ಮಗುವಿದ್ದ ಮಹಿಳೆಗೆ ಮದುವೆಯಾಗುವಂತೆ ಪೀಡಿಸುತ್ತಿದ್ದ ಲವರ್ನಿಂದ ಕೃತ್ಯ