ETV Bharat / state

ಕೋವಿಡ್​​ಗೆ ಇಬ್ಬರು ಬಲಿ... ಆಕ್ಸಿಜನ್ ಕೊರತೆ ಎಂದು ಆರೋಪಿಸಿ ವೈದ್ಯರಿಗೆ ಸಂಬಂಧಿಕರ ತರಾಟೆ

ಆಸ್ಪತ್ರೆ ಸಿಬ್ಬಂದಿ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ, ರೋಗಿಗಳ ಸಾವಿಗೆ ಅವರೇ ಹೊಣೆ ಎಂದು ರೋಗಿಗಳ ಸಂಬಂಧಿಕರು ಆಕ್ರೋಶ ಹೊರಹಾಕಿದ್ದು, ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಇದೆ. ಆಸ್ಪತ್ರೆಯವರು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಚಿಕ್ಕೋಡಿ: ಕೋವಿಡ್​​ಗೆ ಇಬ್ಬರು ಬಲಿ
ಚಿಕ್ಕೋಡಿ: ಕೋವಿಡ್​​ಗೆ ಇಬ್ಬರು ಬಲಿ
author img

By

Published : May 6, 2021, 3:54 PM IST

ಚಿಕ್ಕೋಡಿ (ಬೆಳಗಾವಿ): ಜಿಲ್ಲೆಯ ರಾಯಬಾಗ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಕೋವಿಡ್ ಸೋಂಕಿತರು ಮೃತಪಟ್ಟಿದ್ದು, ಆಮ್ಲಜನಕ ಕೊರತೆಯಿಂದ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ಕೋವಿಡ್ ರೋಗಿಗಳ ಸಾವಿಗೆ ಆಸ್ಪತ್ರೆ ಸಿಬ್ಬಂದಿ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಆಕ್ಸಿಜನ್ ಕೊರತೆ ಎಂದು ಆರೋಪಿಸಿ ವೈದ್ಯರಿಗೆ ಸಂಬಂಧಿಕರ ತರಾಟೆ

ಪಟ್ಟಣ ಪಂಚಾಯಿತಿಯ ಮಾಜಿ ಸದಸ್ಯ ರವಿ ತರಾಳೆ ಎಂಬುವವರ ತಾಯಿ ಕೋವಿಡ್​​​ ಚಿಕಿತ್ಸೆಗೆಂದು ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ಮೃತರ ಸಂಬಂಧಿಕರು ರಾಯಬಾಗ ತಾಲೂಕು ವೈದ್ಯಾಧಿಕಾರಿ ಡಾ. ಬಾನೆ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಸಹ ನಡೆದಿದೆ.

ಆಸ್ಪತ್ರೆ ಸಿಬ್ಬಂದಿ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ, ರೋಗಿಗಳ ಸಾವಿಗೆ ಅವರೇ ಹೊಣೆ ಎಂದು ಆಕ್ರೋಶ ಹೊರಹಾಕಿದ್ದು, ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಇದೆ. ಆಸ್ಪತ್ರೆಯವರು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಗಲಾಟೆ ತಿಳಿಗೊಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.