ಬೆಳಗಾವಿ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳು ಪ್ರತಿದಿನ ವರದಿಯಾಗುತ್ತಿದ್ದರೆ, ಕೆಲ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಮತ್ತೆ ಕೆಲವೆಡೆ ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಾರೆ.
ಬೆಳಗಾವಿಯಲ್ಲಿ ಕೂಡಾ ಇಂದು ಇಬ್ಬರು ಕೊರೊನಾ ಸೋಂಕಿತರು ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿ-284 ಮತ್ತು ಪಿ-300 ಇಬ್ಬರೂ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.
ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 74 ಜನರಲ್ಲಿ ಸೋಂಕು ಪತ್ತೆಯಾಗಿದ್ದು 36 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.